ಉಡುಪಿ (Vishwanews24): ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಗಳು ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ರಾಜ್ಯದ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು.
ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊ0ಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿ ಇರುತ್ತದೆ. ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 18 ರಿಂದ 60 ವರ್ಷದೊಳಗಿನ ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ 250 ರೂ. ಡಿಮ್ಯಾಂಡ್ ಡ್ರಾಫ್ಟ್ನ್ನು
ಕಳುಹಿಸಿಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುತ್ತದೆ. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು ಇವರನ್ನು ಸಂಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…