Featured

ಉಡುಪಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ಯಾಸ್ ದರ ಏರಿಕೆಯಾಗಿದೆ ಆದ್ದರಿಂದ ದರ ಏರಿಕೆ ಅನಿವಾರ್ಯ : ಅಣ್ಣಾ ಮಲೈ  – vishwanews24

ಉಡುಪಿ: ಬಿಜೆಪಿಯ ಜನಾಕ್ರೋಶ ಯಾತ್ರೆ, ಎಲ್ಲರೂ ಜನರ ಜೊತೆಯಾಗಬೇಕು ..

ಒಂದು ದಿನ ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ: ಅಣ್ಣಾ ಮಲೈ

ಉಡುಪಿ: ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಬಳಿಕ ಗ್ಯಾಸ್ ಬಳಕೆ ಜಾಸ್ತಿ ಆಗುತ್ತಿದೆ ಅಲ್ಲದೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ಯಾಸ್ ದರ ಏರಿಕೆಯಾಗಿದೆ ಆದ್ದರಿಂದ ದರ ಏರಿಕೆ ಅನಿವಾರ್ಯ ಎಂದು ಬಿಜೆಪಿ ಮುಖಂಡ ಕೆ ಅಣ್ಣಾ ಮಲೈ ಹೇಳಿದರು.

ಅವರು ಬುಧವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಗ್ಯಾಸ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ನಲ್ಲಿ ಆರ್ಥಿಕ ತಜ್ಞರು ಇದ್ದಾರೆ ಅವರು ಹೇಳಬೇಕು ಆದರೆ ಕಾಂಗ್ರೆಸ್ನ ಆರ್ಥಿಕ ತಜ್ಞರು ಸತ್ಯ ಮಾತನಾಡುವುದಿಲ್ಲ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ಯಾಸ್ ದರ ಏರಿಕೆಯಾಗಿದೆ, ಅವಾಗ ದರ ಏರಿಕೆ ಅನಿವಾರ್ಯ, ಏರಿಕೆ ಮಾಡದಿದ್ದಲ್ಲಿ ಒಂದು ಹಂತದ ಮೇಲೆ ಆಯಿಲ್ ಮಾರ್ಕೆಟಿಂಗ್ ಕಂಪನಿಗೂ ಕಷ್ಟವಾಗುತ್ತದೆ. ಆಯಿಲ್ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುವಾಗ ಸರ್ಕಾರ ಮಧ್ಯ ಪ್ರವೇಶಿಸಿ ಏರಿಕೆಯಾಗದಂತೆ ನೋಡಿಕೊಂಡಿದ್ದಾರೆ ಎಂದರು.

ಗ್ಯಾಸ್ ಹೊರದೇಶದಿಂದ ಬರಬೇಕು, ನಮ್ಮಲ್ಲಿ ಉತ್ಪಾದನೆ ಇಲ್ಲ ಆದರೆ ಇತ್ತೀಚಿನ ವರ್ಷಗಳಲ್ಲಿ ಗ್ಯಾಸ್ ಬಳಕೆ ಜಾಸ್ತಿ ಆಗುತ್ತಿದೆ, ಒಂದು ಹಂತದ ಮೇಲೆ ಆಯಿಲ್ ಮಾರ್ಕೆಟಿಂಗ್ ಕಂಪನಿಯವರಿಗೆ ನಷ್ಟಭರಿಸಲು ಸಾಧ್ಯವಾಗಲ್ಲ ಆದ್ದರಿಂದ ಜನರಿಗೆ ಹೊರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ. ಈಗಿನ ಬೆಲೆ ಏರಿಕೆ ಪರಿಸ್ಥಿತಿ ತಾತ್ಕಾಲಿಕ ಎಂದು ಭಾವಿಸುತ್ತೇನೆ ಎಂದರು.

2014ರಲ್ಲಿ ಭಾರತದಲ್ಲಿ ಶೇಕಡ 64 ಜನರಲ್ಲಿ ಮಾತ್ರ ಗ್ಯಾಸ್ ಬಳಕೆಯಲ್ಲಿತ್ತು ಆದರೆ ಇವತ್ತು ಶೇಕಡ 100 ಗ್ಯಾಸ್ ಬಳಸುತ್ತಾರೆ ಆದ್ದರಿಂದ ಗ್ಯಾಸ್ ಅನ್ನು ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಕೇಂದ್ರ ಸರಕಾರದ ಜೊತೆಗಿರಬೇಕು. ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರದೀಪ್ ಪುರಿ ಅವರು ವಿಶ್ವಮಟ್ಟದಲ್ಲಿ ಗ್ಯಾಸ್ ಲಭ್ಯತೆ ಹುಡುಕುತ್ತಿದ್ದಾರೆ ಮತ್ತು ಈಗಿನ ಪರಿಸ್ಥಿತಿ ತಾತ್ಕಾಲಿಕ ಎಂದು ನಾನು ನಂಬುತ್ತೇನೆ ಎಂದರು.

‘ನಾನೊಬ್ಬ ಕಾರ್ಯಕರ್ತ,  ಪಕ್ಷ ನನಗೆ ಒಂದು ಜವಾಬ್ದಾರಿ ಕೊಟ್ಟಿತ್ತು, ಅದನ್ನು ನಿಭಾಯಿಸಿದ್ದೇನೆ. ಇನ್ನೊಂದು ಜವಾಬ್ದಾರಿ ಕೊಟ್ಟರು ಕೆಲಸ ಮಾಡುತ್ತೇನೆ’ ಎಂದರು.

ರಾಜಕೀಯದಲ್ಲಿ ಅಧಿಕಾರಕ್ಕಿಂತ ತಾಳ್ಮೆ ಮುಖ್ಯ. ತಾಳ್ಮೆಯಿಂದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಒಂದಲ್ಲ ಒಂದು ದಿನ ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ’ ಎಂದರು.

ಕರ್ನಾಟಕದ ಸರ್ಕಾರ ಜನ ವಿರೋಧಿಯಾಗಿದೆ. ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಏನೆಲ್ಲ ಮಾಡುತ್ತಿದೆ ಎಂಬುದನ್ನು ಇಡೀ ದೇಶ ನೋಡ್ತಾ ಇದೆ. ಬಿಜೆಪಿ ಜನಾಕ್ರೋಶ ಯಾತ್ರೆಗೆ ಜನರು ಜೊತೆಯಾಗಬೇಕು’ ಎಂದು ಹೇಳಿದರು.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

3 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

3 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 hours ago