ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯು ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಿಸಿದ ಕಛೇರಿ ಸಹಿತ ‘ಶ್ರೀ ಜನಾರ್ದನ ಮಂಟಪ’ದ ಉದ್ಘಾಟನಾ ಸಮಾರಂಭ ಅಂಬಲಪಾಡಿಯ ಕಂಬ್ಳಕಟ್ಟದಲ್ಲಿ ಮಾರ್ಚ್7 , 2021 ಭಾನುವಾರದಂದು ಸಂಜೆ 5.೦೦ ಗಂಟೆಗೆ ಜರಗಲಿದೆ.
ಸುಮಾರು ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಟ್ಟಡವನ್ನು ನಾಡೋಜ ಡಾ. ಜಿ. ಶಂಕರ್‌ರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬೀ ವಿಜಯ ಬಲ್ಲಾಳರು ಉದ್ಘಾಟಿಸಲಿದ್ದಾರೆ. ಅಭ್ಯಾಗತರಾಗಿ ಉಡುಪಿಯ ಶಾಸಕ ಕೆ. ರಘುಪತಿ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ರೋಹಿತ್ ಎಚ್ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೋಹಿಣಿ ಎಸ್. ಪೂಜಾರಿ ಭಾಗವಹಿಸಲಿದ್ದಾರೆ. ಬಳಿಕ ಪ್ರಶಸ್ತಿ ಪ್ರದಾನ ಮತ್ತು ಮಂಡಳಿಯ ಕಲಾವಿದರಿಂದ ‘ಶ್ವೇತಕುಮಾರ ಚರಿತ್ರೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್, ಕಾರ್ಯದರ್ಶಿ ಕೆ.ಜೆ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…