ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

Featured, ಉಡುಪಿ

 ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ

     ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನೂತನವಾಗಿಅಕ್ಕ ಕೆಫೆಪ್ರಾರಂಭಿಸಲು ಉದ್ದೇಶಿಸಿದ್ದು, ಕೆಫೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಸಲುವಾಗಿ ಅರ್ಹ ಸ್ವಸಹಾಯ ಗುಂಪುಗಳನ್ನು ಆಯ್ಕೆ ಮಾಡಲು ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

     ಕಡ್ಡಾಯವಾಗಿ ಗ್ರಾಮೀಣ ಸಂಜೀವಿನಿ ಸ್ವಸಹಾಯ ಗುಂಪುಗಳಾಗಿರುವ, ಹೋಟೆಲ್ ಅಥವಾ ಕ್ಯಾಟರಿಂಗ್ ಉದ್ಯಮದಲ್ಲಿ ಪೂರ್ವಾನ್ವಯ ಅನುಭವ ಹೊಂದಿರುವ ಸ್ಥಳೀಯ ಸ್ವಸಹಾಯ ಗುಂಪುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸ್ವಸಹಾಯ ಗುಂಪುಗಳು ತಾವು ತಯಾರಿಸುವ ಆಹಾರದ ಒಂದು ಮಾದರಿ ಮೆನು ಮತ್ತು ದರದ ಪಟ್ಟಿಯೊಂದಿಗೆ ಹಾಗೂ ತಮ್ಮ ಸಂಘದ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.  

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

    ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಪಂಚಾಯತ್ ಉಡುಪಿ (ಸಂಜೀವಿನಿ ಯೋಜನೆ) ದೂರವಾಣಿ ಸಂಖ್ಯೆ: 9844234080 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply