ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ ತರಗತಿ ವಿದ್ಯಾರ್ಥಿಯನ್ನು ಅಕ್ಕಪಡೆ ಸಿಬ್ಬಂದಿ ಸಮಯೋಚಿತ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ.
ಜುಲೈ 19ರಂದು ಉಡುಪಿ ಜಿಲ್ಲಾ ಕಂಟ್ರೋಲ್ ರೂಮ್‌ಗೆ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಮಾಹಿತಿ ದೊರಕುತ್ತಿದ್ದಂತೆ ಅಕ್ಕಪಡೆ ಸಿಬ್ಬಂದಿ ತಕ್ಷಣವೇ ಹುಡುಕಾಟ ಆರಂಭಿಸಿದರು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪರಿಶೀಲನೆ ನಡೆಸಿದ ವೇಳೆ, ಬಾಲಕ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಇರುವುದನ್ನು ಸಿಬ್ಬಂದಿ ಗುರುತಿಸಿದರು.
ತಕ್ಷಣವೇ ಬಸ್‌ನ್ನು ನಿಲ್ಲಿಸಿ ಬಾಲಕನನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು, ಬಳಿಕ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಯಿತು.
ಅಕ್ಕಪಡೆ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಬಾಲಕ ಸುರಕ್ಷಿತವಾಗಿ ಪತ್ತೆಯಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ವಿಶೇಷ ಸೂಚನೆ: ಸಾರ್ವಜನಿಕರು ಅಥವಾ ಮಕ್ಕಳು, ಮಹಿಳೆಯರು ಅಪಾಯದಲ್ಲಿದ್ದಾಗ ಅಥವಾ ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ ಉಚಿತ ತುರ್ತು ಸಹಾಯವಾಣಿ 112 ಅಥವಾ ಮಹಿಳಾ ಸಹಾಯವಾಣಿ 181 ಗೆ ಸಂಪರ್ಕಿಸಬಹುದು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…