Featured

ಉಡುಪಿ: ಅಕ್ಕಿ ನೀಡದಂತೆ ಕೇಂದ್ರ ಸರ್ಕಾರ ತಡೆಯೊಡ್ಡಿರುವುದು ರಾಜ್ಯದ ಬಡಜನತೆಗೆ ಬಗೆದ ದ್ರೋಹವಾಗಿದೆ : ರಮೇಶ್ ಕಾಂಚನ್ ಆಕ್ರೋಶ – Vishwanews24

ಉಡುಪಿ: ಅಕ್ಕಿ ನೀಡದಂತೆ ಕೇಂದ್ರ ಸರ್ಕಾರ ತಡೆಯೊಡ್ಡಿರುವುದು ರಾಜ್ಯದ ಬಡಜನತೆಗೆ ಬಗೆದ ದ್ರೋಹವಾಗಿದೆ : ರಮೇಶ್ ಕಾಂಚನ್ ಆಕ್ರೋಶ

ಉಡುಪಿ: ಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮವು ಅಕ್ಕಿ ಕೊಡಲು ಒಪ್ಪಿಕೊಂಡ ಬಳಿಕ ರಾಜ್ಯಕ್ಕೆ ಅಕ್ಕಿ ನೀಡದಂತೆ ಕೇಂದ್ರ ಸರ್ಕಾರ ತಡೆಯೊಡ್ಡಿರುವುದು ರಾಜ್ಯದ ಬಡಜನತೆಗೆ ಬಗೆದ ದ್ರೋಹವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶಕ್ಕಿಂತ ನಮ್ಮ ದೇಶ ಕೆಳಗಿನ ಸ್ಥಾನದಲ್ಲಿದ್ದರೂ ರಾಜ್ಯಕ್ಕೆ ಅಕ್ಕಿ ನೀಡದೆ ಸತಾಯಿಸುತ್ತಿರುವುದನ್ನು ಕಂಡು ಬಹಳ ಬೇಸರವಾಗುತ್ತಿದೆ. ಭಾರತೀಯ ಆಹಾರ ನಿಗಮದ ಗೋದಾಮಿನಲ್ಲಿ ಪ್ರತಿ ವರ್ಷ ಟನ್ಗಟ್ಟಲೆ ಆಹಾರ ಧಾನ್ಯವು ಕೊಳೆಯುವ ಸ್ಥಿತಿಯಲ್ಲಿದ್ದರೂ ಕರ್ನಾಟಕಕ್ಕೆ ದ್ವೇಷ ಸಾಧಿಸುತ್ತಿರುವ ಬಿಜೆಪಿ ಸರ್ಕಾರವು ನಾವು ಹಣ ನೀಡುತ್ತೇವೆ ಎಂದು ಹೇಳಿದರೂ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲು ಒಪ್ಪುತ್ತಿಲ್ಲ.

ಪ್ರಧಾನಿ ಮೋದಿಯವರು ನೆರೆಯ ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ ಸರ್ಕಾರಕ್ಕೆ ಸುಮಾರು 10,000 ಟನ್ಗಳಷ್ಟು ಆಹಾರ ಧಾನ್ಯಗಳನ್ನು ಕಳುಹಿಸಿದ್ದಾರೆ ಆದರೆ ಭಾರತದಲ್ಲಿ ಅತ್ಯಧಿಕ ತೆರಿಗೆ ಸಂಗ್ರಹವಾಗುವ ಕರ್ನಾಟಕ ರಾಜ್ಯಕ್ಕೆ ಅಕ್ಕಿಯನ್ನು ಕೊಡಲು ಸಿದ್ದರಿಲ್ಲ. ಕರ್ನಾಟಕದಿಂದ ಬಿಜೆಪಿಯ 25 ಸಂಸದರನ್ನು ಜನರು ಆರಿಸಿದರೂ ಪ್ರಧಾನಿ ಮೋದಿಯವರ ಮುಂದೆ ಕರ್ನಾಟಕಕ್ಕೆ ನ್ಯಾಯ ಒದಗಿಸುವಂತೆ ಮಾತನಾಡುವ ದಮ್ಮು ತಾಕತ್ತು ಯಾವ ಸಂಸದರಿಗೂ ಇಲ್ಲ. ಕರ್ನಾಟಕದ ಸಂಸದರು ಇನ್ನಾದರೂ ತಮ್ಮ ರಾಜ್ಯಕ್ಕೆ ನ್ಯಾಯ ಒದಗಿಸುವಂತೆ ಪ್ರಧಾನಿ ಮೋದಿಯವರಲ್ಲಿ ಕೇಳಲಿ. ಕೇಂದ್ರ ಬಿಜೆಪಿ ಸರ್ಕಾರವು ದ್ವೇಷ ರಾಜಕಾರಣವನ್ನು ಬಿಟ್ಟು ಕರ್ನಾಟಕದ ಜನತೆಗೆ ಅಕ್ಕಿ ಪೂರೈಕೆ ಮಾಡಲು ಸಹಕಾರಿಯಾಗಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago