ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಮಂದಿ ಬಾಂಗ್ಲಾದೇಶದ ಪ್ರಜೆಗಳ ಶಿಕ್ಷೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಅವರನ್ನು ಸ್ವದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
2024ರ ಅಕ್ಟೋಬರ್ 11ರಂದು ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದಿದ್ದ ಈ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿತ್ತು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2025ರ ಡಿಸೆಂಬರ್ 8ರಂದು ಆರೋಪಿಗಳಿಗೆ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿತ್ತು.
ಅವರ ಶಿಕ್ಷೆಯ ಅವಧಿ 2026ರ ಅಕ್ಟೋಬರ್ 10ರಂದು ಪೂರ್ಣಗೊಂಡಿದ್ದು, ಕೇಂದ್ರ ಗೃಹ ಸಚಿವಾಲಯ ಹಾಗೂ ಪ್ರಾದೇಶಿಕ ವಿದೇಶಿಯರ ನೋಂದಣಾಧಿಕಾರಿ, ಬೆಂಗಳೂರು ಇವರ ಆದೇಶದಂತೆ ಗಡಿಪಾರು ಪ್ರಕ್ರಿಯೆ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 10 ಮಂದಿಯನ್ನು ಪೊಲೀಸ್ ಭದ್ರತೆಯಲ್ಲಿ ನ.23ರಂದು ಉಡುಪಿಯಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿರುವ ಬಿಎಸ್‌ಎಫ್ ಅಧಿಕಾರಿಗಳ ಮುಂದೆ ಹಾಜರುಪಡಿಸಲು ಕರೆದೊಯ್ಯಲಾಗಿದೆ. ಅಲ್ಲಿಂದ ಭಾರತದಿಂದ ಗಡಿಪಾರು ಮಾಡುವ ಮುಂದಿನ ಪ್ರಕ್ರಿಯೆ ನಡೆಯಲಿದೆ.
ಉಡುಪಿ : ನ. 27ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ, ಡೈರಿ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ ಉಡುಪಿ:…
ನಂದಿನಿ ಮೊಸರಿನ ದರ 2 ರೂ.ಇಳಿಕೆ ಬೆಂಗಳೂರು : ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ಮೊಸರಿನ…
ಕುಂಜಾರುಗಿರಿ: ವ್ಯಕ್ತಿಯ ದರೋಡೆ ಪ್ರಕರಣ ; ಆರೋಪಿ ಬಂಧನ ಉಡುಪಿ: ಕುರ್ಕಾಲು ಗ್ರಾಮದ ಕುಂಜಾರುಗಿರಿ ದುರ್ಗಾದೇವಿ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮಕ್ಕೆ…
ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…
ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…
ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…