ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು. ಭಂಡಾರಿ (19) ಬಂಧಿತ ಆರೋಪಿಗಳು. ಇವರಿಂದ 53,300 ರೂ. ಮೌಲ್ಯದ 740 ಗ್ರಾಂ ತೂಕದ ಗಾಂಜಾ, 25 ಸಾವಿರ ರೂ. ಮೌಲ್ಯದ ಸ್ಕೂಟರ್, 2170ರೂ. ನಗದು, 2 ಮೊಬೈಲ್, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 98,770ರೂ. ಎಂದು ಅಂದಾಜಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್ ಮತ್ತು ಪ್ರೊಬೆಶನರಿ ಡಿ.ವೈ.ಎಸ್.ಪಿ. ಗೀತಾ ಪಾಟೀಲ್ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸೆನ್ ಪೊಲೀಸ್ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್, ವೆಂಕಟೇಶ್, ನಿಲೇಶ್, ರಾಘವೇಂದ್ರ, ಪ್ರಶಾಂತ್ ಮತ್ತು ಚರಣ್‌ರಾಜ್ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…