ಉಡುಪಿ : ಅಕ್ರಮ ಮಾದಕ ದ್ರವ್ಯ ಸಾಗಾಟ, ಸೇವನೆ : ಇಬ್ಬರು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು – Vishwanews24
ಉಡುಪಿ : ಅಕ್ರಮ ಮಾದಕ ದ್ರವ್ಯ ಸಾಗಾಟ, ಸೇವನೆ : ಇಬ್ಬರು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು..
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅಕ್ರಮ ಡ್ರಗ್ಸ್ ಸಾಗಾಟ ಜಾಲಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದ್ದು. ಇಬ್ಬರು ವಿದ್ಯಾರ್ಥಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆ ರವಾನಿಸಿದ್ದಾರೆ.
ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತು ಸಾಗಾಟ, ಸೇವನೆಯಲ್ಲಿ ಶಾಮೀಲಾಗಿರುವ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚೀಂದ್ರ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಲಾಖೆ ಅಧಿಕಾರಿಗಳು ಮಾದಕ ವಸ್ತುಗಳ ಸಾಗಾಟ, ಸೇವನೆ ಮೇಲೆ ಕಳೆದ 6 ತಿಂಗಳಿನಿಂದ ನಿರಂತರ ಪ್ರಕರಣ ದಾಖಲಿಸಿ ಕಂಟ್ರೋಲ್ ಮಾಡುತ್ತಿದ್ದಾರೆ.
ದಾದಾ ಸಾಹೇಬ್ ಫಾಲ್ಕೆ ‘ಭರವಸೆಯ ನಟ’ ಪ್ರಶಸ್ತಿ ಪಡೆಯಲಿರುವ ‘ರಿಷಬ್ ಶೆಟ್ಟಿ – VIshwanews24
ಕೆಲವು ವಿದ್ಯಾರ್ಥಿಗಳು ಕೂಡಾ ಮಾದಕ ದ್ರವ್ಯ ಸಾಗಾಟದಲ್ಲಿ ನಿರತರಾಗಿದ್ದಾರೆ ಎನ್ನುವ ಅಂಶ ತನಿಖೆಯಿಂದ ಬೆಳಕಿಗೆ ಬಂದಿದ್ದು, ಕಾಲೇಜಿನ ಆಡಳಿತ ಮಂಡಳಿಗೆ ಈ ವಿಚಾರವನ್ನು ತಿಳಿಸಿದ್ದೇವೆ.
ಕ್ರಿಮಿನಲ್ ಕೃತ್ಯದಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ನಗರದ ಕಾಲೇಜಿನ ಆಡಳಿತ ಮಂಡಳಿ ಕೂಡಾ ಈ ಬಗ್ಗೆ ಗಂಭೀರ ಕಾನೂನು ಕ್ರಮವವನ್ನು ಅಂತಹ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಭೇಕೆಂದು ಸೂಚನೆ ನೀಡಿದಂತೆ ಈಗಾಗಲೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಇಂತಹ ಮಾದಕ ವಸ್ತುಗಳ ಅಕ್ರಮ ಸಾಗಾಟ, ಸೇವನೆಯಲ್ಲಿ ಭಾಗಿಯಾದರೆ ಯಾರೂ ಕೂಡಾ ನಮ್ಮ ನೆರವಿಗೆ ಬರುವುದಿಲ್ಲ ಎನ್ನುವುದನ್ನು ಅವರು ತಿಳಿದುಕೊಳ್ಳಬೇಕು.
ಕಾಸರಗೋಡು: ಅಂಜುಶ್ರೀ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ – Vishwanews24
ಈ ಕ್ರಮದ ಮೂಲಕ ಅವರ ಭವಿಷ್ಯವನ್ನು ಹಾಳು ಮಾಡುವ ನಿರ್ಧಾರ ಅಲ್ಲ ಎನ್ನುವುದನ್ನು ನಾವು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಎಸ್ಪಿ ಹಾಕೆ ಅಕ್ಷಯ್ ಮಚೀಂದ್ರ ಹೇಳಿದ್ದಾರೆ.
