Featured

ಉಡುಪಿ : ಅಕ್ರಮ ಮಾದಕ ದ್ರವ್ಯ ಸಾಗಾಟ, ಸೇವನೆ : ಇಬ್ಬರು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು – Vishwanews24

ಉಡುಪಿ : ಅಕ್ರಮ ಮಾದಕ ದ್ರವ್ಯ ಸಾಗಾಟ, ಸೇವನೆ :  ಇಬ್ಬರು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು..

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅಕ್ರಮ ಡ್ರಗ್ಸ್ ಸಾಗಾಟ ಜಾಲಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದ್ದು. ಇಬ್ಬರು ವಿದ್ಯಾರ್ಥಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆ ರವಾನಿಸಿದ್ದಾರೆ.

ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತು ಸಾಗಾಟ, ಸೇವನೆಯಲ್ಲಿ ಶಾಮೀಲಾಗಿರುವ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚೀಂದ್ರ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಲಾಖೆ ಅಧಿಕಾರಿಗಳು ಮಾದಕ ವಸ್ತುಗಳ ಸಾಗಾಟ, ಸೇವನೆ ಮೇಲೆ ಕಳೆದ 6 ತಿಂಗಳಿನಿಂದ ನಿರಂತರ ಪ್ರಕರಣ ದಾಖಲಿಸಿ ಕಂಟ್ರೋಲ್ ಮಾಡುತ್ತಿದ್ದಾರೆ.

ಕೆಲವು ವಿದ್ಯಾರ್ಥಿಗಳು ಕೂಡಾ ಮಾದಕ ದ್ರವ್ಯ ಸಾಗಾಟದಲ್ಲಿ ನಿರತರಾಗಿದ್ದಾರೆ ಎನ್ನುವ ಅಂಶ ತನಿಖೆಯಿಂದ ಬೆಳಕಿಗೆ ಬಂದಿದ್ದು, ಕಾಲೇಜಿನ ಆಡಳಿತ ಮಂಡಳಿಗೆ ಈ ವಿಚಾರವನ್ನು ತಿಳಿಸಿದ್ದೇವೆ.

ಕ್ರಿಮಿನಲ್ ಕೃತ್ಯದಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ನಗರದ ಕಾಲೇಜಿನ ಆಡಳಿತ ಮಂಡಳಿ ಕೂಡಾ ಈ ಬಗ್ಗೆ ಗಂಭೀರ ಕಾನೂನು ಕ್ರಮವವನ್ನು ಅಂತಹ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಭೇಕೆಂದು ಸೂಚನೆ ನೀಡಿದಂತೆ ಈಗಾಗಲೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇಂತಹ ಮಾದಕ ವಸ್ತುಗಳ ಅಕ್ರಮ ಸಾಗಾಟ, ಸೇವನೆಯಲ್ಲಿ ಭಾಗಿಯಾದರೆ ಯಾರೂ ಕೂಡಾ ನಮ್ಮ ನೆರವಿಗೆ ಬರುವುದಿಲ್ಲ ಎನ್ನುವುದನ್ನು ಅವರು ತಿಳಿದುಕೊಳ್ಳಬೇಕು.

ಈ ಕ್ರಮದ ಮೂಲಕ ಅವರ ಭವಿಷ್ಯವನ್ನು ಹಾಳು ಮಾಡುವ ನಿರ್ಧಾರ ಅಲ್ಲ ಎನ್ನುವುದನ್ನು ನಾವು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಎಸ್ಪಿ ಹಾಕೆ ಅಕ್ಷಯ್‌ ಮಚೀಂದ್ರ ಹೇಳಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

11 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

11 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

12 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

12 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

13 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

13 hours ago