ಉಡುಪಿ: ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲವನ್ನು ರೈಲ್ವೆ ರಕ್ಷಣಾ ದಳದ ಅಧಿಕಾರಿಗಳು ಭೇದಿಸಿ ಕಾರವಾರ ಗ್ರೀನ್ ಸ್ವೀಟ್ ನ ಅಬ್ದುಲ್ ನಸೀರ್ ಇಬ್ರಾಹಿಂ ಶೇಖ್ ಎಂಬಾತನನ್ನು ಅ.29 ರಂದು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತ ನಸೀರ್ ಇಬ್ರಾಹಿಂ ಶೇಖ್ ನಿಂದ ಮುಂಗಡ ಕಾಯ್ದಿರಿಸಿದ 20 ಟಿಕೆಟ್ ಗಳು ಹಾಗೂ ಹಿಂದಿನ ದಿನಾಂಕಗಳ 13 ಟಿಕೆಟ್ ಗಳುಕಂಪ್ಯೂಟರ್ 1020 ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನಿಗೆ 5 ಸಾವಿರ ರೂ. ದಂಡ ವಿಧಿಸಿ ಬಿಡುಗಡೆ ಮಾಡಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಈತ ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐ ಆರ್ ಟಿ ಸಿ ಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟುಗಳನ್ನು ಬುಕ್ ಮಾಡುತ್ತಿದ್ದ. ಅಲ್ಲದೆ ಟಿಕೆಟ್ ಕೇಳಿಕೊಂಡು ಬರುತ್ತಿದ್ದ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪರಿಶೀಸಲು ಸ್ಥಳೀಯ ಆರ್ ಪಿ ಎಫ್ ಅಧಿಕಾರಿಗಳು ಕೆಲವು ಗೌಪ್ಯ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್ ಪತ್ತೆಯಾಗಿದೆ.
ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐಆರ್ಟಿಸಿಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟ್ಗಳನ್ನು ಬುಕ್ ಮಾಡಿ ಇಡಲಾಗುತ್ತಿತ್ತು. ಟಿಕೆಟ್ ಕೇಳಿ ಬರುವ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲು ಸ್ಥಳೀಯ ಆರ್ಪಿಎಫ್ ಅಧಿಕಾರಿಗೆ ಸೂಚನೆ ಬಂದಿತ್ತು. ಅದರಂತೆ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್ಗಳು ಪತ್ತೆಯಾದವು. ನಕಲಿ ಹೆಸರಿನಲ್ಲಿ ಟಿಕೆಟ್ ಬುಕ್ ಮಾಡುವುದು ರೈಲ್ವೆ ಕಾಯ್ದೆ 143ರ ಪ್ರಕಾರ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದ 20 ಟಿಕೆಟ್ಗಳನ್ನು ರದ್ದು ಮಾಡಲಾಗಿದೆ. ಅಕ್ರಮ ಎಸಗುತ್ತಿದ್ದ ವಿವಿಧ ಯೂಸರ್ ಐಡಿಗಳನ್ನು ತಡೆ ಹಿಡಿಯಲು ಐಆರ್ಟಿಸಿಗೆ ಪತ್ರ ಬರೆಯಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…