Featured

ಉಡುಪಿ : ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲ ಪತ್ತೆ , ಆರೋಪಿ ಬಂಧನ -Vishwanews24

ಉಡುಪಿ: ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲವನ್ನು ರೈಲ್ವೆ ರಕ್ಷಣಾ ದಳದ ಅಧಿಕಾರಿಗಳು ಭೇದಿಸಿ ಕಾರವಾರ ಗ್ರೀನ್ ಸ್ವೀಟ್ ನ ಅಬ್ದುಲ್ ನಸೀರ್ ಇಬ್ರಾಹಿಂ ಶೇಖ್ ಎಂಬಾತನನ್ನು ಅ.29 ರಂದು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ನಸೀರ್ ಇಬ್ರಾಹಿಂ ಶೇಖ್ ನಿಂದ ಮುಂಗಡ ಕಾಯ್ದಿರಿಸಿದ 20 ಟಿಕೆಟ್ ಗಳು ಹಾಗೂ ಹಿಂದಿನ ದಿನಾಂಕಗಳ 13 ಟಿಕೆಟ್ ಗಳುಕಂಪ್ಯೂಟರ್ 1020 ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನಿಗೆ 5 ಸಾವಿರ ರೂ. ದಂಡ ವಿಧಿಸಿ ಬಿಡುಗಡೆ ಮಾಡಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಈತ ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐ ಆರ್ ಟಿ ಸಿ ಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟುಗಳನ್ನು ಬುಕ್ ಮಾಡುತ್ತಿದ್ದ. ಅಲ್ಲದೆ ಟಿಕೆಟ್ ಕೇಳಿಕೊಂಡು ಬರುತ್ತಿದ್ದ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪರಿಶೀಸಲು ಸ್ಥಳೀಯ ಆರ್ ಪಿ ಎಫ್ ಅಧಿಕಾರಿಗಳು ಕೆಲವು ಗೌಪ್ಯ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್ ಪತ್ತೆಯಾಗಿದೆ.

ಭಾರತೀಯ ರೈಲ್ವೆಯ ಇ ಟಿಕೆಟ್ ಬುಕಿಂಗ್ ವ್ಯವಸ್ಥೆ ಐಆರ್​ಟಿಸಿಯಲ್ಲಿ ವಿವಿಧ ನಕಲಿ ಹೆಸರಿನಲ್ಲಿ ಖಾತೆ ತೆರೆದು ಸೀಟ್​ಗಳನ್ನು ಬುಕ್ ಮಾಡಿ ಇಡಲಾಗುತ್ತಿತ್ತು. ಟಿಕೆಟ್ ಕೇಳಿ ಬರುವ ಪ್ರಯಾಣಿಕರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಕೇಂದ್ರ ಕಚೇರಿಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲು ಸ್ಥಳೀಯ ಆರ್​ಪಿಎಫ್ ಅಧಿಕಾರಿಗೆ ಸೂಚನೆ ಬಂದಿತ್ತು. ಅದರಂತೆ ದಾಳಿ ನಡೆಸಿದಾಗ ಸಾಕಷ್ಟು ಟಿಕೆಟ್​ಗಳು ಪತ್ತೆಯಾದವು. ನಕಲಿ ಹೆಸರಿನಲ್ಲಿ ಟಿಕೆಟ್ ಬುಕ್ ಮಾಡುವುದು ರೈಲ್ವೆ ಕಾಯ್ದೆ 143ರ ಪ್ರಕಾರ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದ 20 ಟಿಕೆಟ್​ಗಳನ್ನು ರದ್ದು ಮಾಡಲಾಗಿದೆ. ಅಕ್ರಮ ಎಸಗುತ್ತಿದ್ದ ವಿವಿಧ ಯೂಸರ್ ಐಡಿಗಳನ್ನು ತಡೆ ಹಿಡಿಯಲು ಐಆರ್​ಟಿಸಿಗೆ ಪತ್ರ ಬರೆಯಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago