ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ, ಅಕ್ಷತಾ ಪೂಜಾರಿ ಎಂಬ ಮುಗ್ಧ ಯುವತಿಗೆ ಹಲ್ಲೆ ನಡೆಸಿದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರಿಗೆ ದೂರು ಕೊಟ್ಟಾಗ ಠಾಣಾಧಿಕಾರಿ ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿರುವ ಬಗ್ಗೆ ಯುವತಿ ಆರೋಪ ಮಾಡಿದ್ದು, ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸು ದಾಖಲಿಸಿ ಯುವತಿಗೆ ನ್ಯಾಯ ಒದಗಿಸುವಂತೆ ಆಗ್ರಹ ಮಾಡಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…