ಉಡುಪಿ : ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಜಾರಿಯಾದ ನ್ಯಾಯಾಲಯದ ವಾರಂಟ್‌ನ ಜಾರಿ ವಿಷಯದಲ್ಲಿ ಇತ್ತೀಚೆಗೆ ಉಂಟಾದ ವಿವಾದದಲ್ಲಿ ಉಪ್ಪೂರಿನ ಅಕ್ಷತಾ ಪೂಜಾರಿ ಎಂಬ ವಿದ್ಯಾರ್ಥಿನಿ ಬ್ರಹ್ಮಾವರ ಪೊಲೀಸರ ವಿರುದ್ಧ ದಾಖಲಿಸಿದ ಪ್ರಕರಣ ಹಾಗೂ ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತಂತೆ ಆಕೆಯ ವಿರುದ್ಧ ದಾಖಲಿಸಿದ ಪ್ರಕರಣಗಳೆರಡನ್ನೂ ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುವಂತೆ ಡಿಜಿ ಕಚೇರಿಗೆ ಕಳುಹಿಸಿದ ಪ್ರಸ್ತಾಪವನ್ನು ಅಂಗೀಕರಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರು ಹಾಗೂ ಪ್ರತಿದೂರುಗಳೆರಡರ ತನಿಖೆಯನ್ನು ಸಿಐಡಿ ನಡೆಸಲಿದೆ ಎಂದು ಅವರು ತಿಳಿಸಿದರು.
ಇದಕ್ಕೆ ಮುನ್ನ ನೀಡಿದ ಹೇಳಿಕೆಯಲ್ಲಿ ಅವರು ಪ್ರಕರಣಗಳ ತನಿಖೆಯನ್ನು ಮಣಿಪಾಲ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಮೂವರು ಪೊಲೀಸರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಹೇಳಿದ್ದರು.
ಪ್ರಕರಣದಲ್ಲಿ ನ್ಯಾಯ ಹಾಗೂ ಪಾರದರ್ಶಕತೆಯನ್ನು ಖಚಿತಪಡಿಸಿ ಕೊಳ್ಳಲು ಇವನ್ನು ಮಾಡಲಾಗಿದೆ. ಡಿ.18ರಂದು ಬ್ರಹ್ಮಾವರ ಠಾಣೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಕಾರರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಕಾರರು ಠಾಣೆಯ ಮುಂದೆ ಅನುಮತಿ ಇಲ್ಲದೇ ಧ್ವನಿವರ್ದಕ ಬಳಸಿದ್ದ ಕ್ಕಾಗಿ 200ರೂ. ದಂಡ ವಿಧಿಸ ಬಹುದಾದ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನೆಗೆ ಮುನ್ನ ಪೊಲೀಸರು ಆಯೋಜಕರಿಗೆ ನೋಟೀಸು ನೀಡಿದ್ದರೂ ಅನುಮತಿ ಇಲ್ಲದೇ ಅದನ್ನು ಬಳಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಹರಿರಾಂ ಶಂಕರ್ ತಿಳಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…