Featured

ಉಡುಪಿ : ಅಕ್ಷತಾ ಪೂಜಾರಿಗೆ ಹಲ್ಲೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ಸಿಐಡಿ ತನಿಖೆಗೆ :  ಎಸ್ಪಿ ಹರಿರಾಮ್ ಶಂಕರ್ – vishwanews24

ಉಡುಪಿ : ಅಕ್ಷತಾ ಪೂಜಾರಿಗೆ ಹಲ್ಲೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ಸಿಐಡಿ ತನಿಖೆಗೆ :  ಎಸ್ಪಿ ಹರಿರಾಮ್ ಶಂಕರ್

ಉಡುಪಿ : ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಜಾರಿಯಾದ ನ್ಯಾಯಾಲಯದ ವಾರಂಟ್‌ನ ಜಾರಿ ವಿಷಯದಲ್ಲಿ ಇತ್ತೀಚೆಗೆ ಉಂಟಾದ ವಿವಾದದಲ್ಲಿ ಉಪ್ಪೂರಿನ ಅಕ್ಷತಾ ಪೂಜಾರಿ ಎಂಬ ವಿದ್ಯಾರ್ಥಿನಿ ಬ್ರಹ್ಮಾವರ ಪೊಲೀಸರ ವಿರುದ್ಧ ದಾಖಲಿಸಿದ ಪ್ರಕರಣ ಹಾಗೂ ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತಂತೆ ಆಕೆಯ ವಿರುದ್ಧ ದಾಖಲಿಸಿದ ಪ್ರಕರಣಗಳೆರಡನ್ನೂ ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುವಂತೆ ಡಿಜಿ ಕಚೇರಿಗೆ ಕಳುಹಿಸಿದ ಪ್ರಸ್ತಾಪವನ್ನು ಅಂಗೀಕರಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರು ಹಾಗೂ ಪ್ರತಿದೂರುಗಳೆರಡರ ತನಿಖೆಯನ್ನು ಸಿಐಡಿ ನಡೆಸಲಿದೆ ಎಂದು ಅವರು ತಿಳಿಸಿದರು.

ಇದಕ್ಕೆ ಮುನ್ನ ನೀಡಿದ ಹೇಳಿಕೆಯಲ್ಲಿ ಅವರು ಪ್ರಕರಣಗಳ ತನಿಖೆಯನ್ನು ಮಣಿಪಾಲ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಮೂವರು ಪೊಲೀಸರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಹೇಳಿದ್ದರು.

ಪ್ರಕರಣದಲ್ಲಿ ನ್ಯಾಯ ಹಾಗೂ ಪಾರದರ್ಶಕತೆಯನ್ನು ಖಚಿತಪಡಿಸಿ ಕೊಳ್ಳಲು ಇವನ್ನು ಮಾಡಲಾಗಿದೆ. ಡಿ.18ರಂದು ಬ್ರಹ್ಮಾವರ ಠಾಣೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಕಾರರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಕಾರರು ಠಾಣೆಯ ಮುಂದೆ ಅನುಮತಿ ಇಲ್ಲದೇ ಧ್ವನಿವರ್ದಕ ಬಳಸಿದ್ದ ಕ್ಕಾಗಿ 200ರೂ. ದಂಡ ವಿಧಿಸ ಬಹುದಾದ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನೆಗೆ ಮುನ್ನ ಪೊಲೀಸರು ಆಯೋಜಕರಿಗೆ ನೋಟೀಸು ನೀಡಿದ್ದರೂ ಅನುಮತಿ ಇಲ್ಲದೇ ಅದನ್ನು ಬಳಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಹರಿರಾಂ ಶಂಕರ್ ತಿಳಿಸಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago