ಉಡುಪಿ : ಅಕ್ಷತಾ ಪೂಜಾರಿ ಮೇಲೆ ನಡೆದ ದೌರ್ಜನ್ಯದ ವಿರುದ್ಧ ನ್ಯಾಯ ಒದಗಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಮನವಿ – vishwanews24

Featured, ಉಡುಪಿ

ಉಡುಪಿ : ಅಕ್ಷತಾ ಪೂಜಾರಿ ಮೇಲೆ ನಡೆದ ದೌರ್ಜನ್ಯದ ವಿರುದ್ಧ ನ್ಯಾಯ ಒದಗಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಮನವಿ

ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಷತಾ ಪೂಜಾರಿ ಅವರ ಮೇಲೆ ನಡೆದ ಮಹಿಳಾ ದೌರ್ಜನ್ಯದ ವಿರುದ್ಧ ತಕ್ಷಣ ಕ್ರಮ ಜರಗಿಸಿ ನ್ಯಾಯ ಒದಗಿಸುವಂತೆ ಇಂದು ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಿಳಾಮೋರ್ಚಾದ ಜಿಲ್ಲಾಧ್ಯಕ್ಷರಾದ ಸಂದ್ಯಾ ರಮೇಶ್ , ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ್ ಶೆಟ್ಟಿ , ಕಾಪು ಮಂಡಲದ ಅಧ್ಯಕ್ಷರಾದ ನೀತಾ ಗುರುರಾಜ್ ಪೂಜಾರಿ , ಉಡುಪಿ ನಗರ ಅಧ್ಯಕ್ಷರಾದ ನೀತಾ ಪ್ರಭು , ಉಡುಪಿ ಗ್ರಾಮಾಂತರ ಅಧ್ಯಕ್ಷರಾದ ರಮ್ಯ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು

Leave a Reply