Featured

ಉಡುಪಿ: ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಅನೂಪ್ ಶೆಟ್ಟಿ -Vishwanews24

ಉಡುಪಿ: ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಅನೂಪ್ ಶೆಟ್ಟಿ -Vishwanews24

ಉಡುಪಿ: ಫೈನಾನ್ಸಿನ ಹಣಕಾಸು ವಿಚಾರದಲ್ಲಿ ಮನಸ್ತಾಪ ಉಂಟಾಗಿ ಅಜೇಂದ್ರ ಶೆಟ್ಟಿಯನ್ನು ಕೊಲೆ ಮಾಡಿದ್ದಾಗಿ ಪಾಲುದಾರ ಅನೂಪ್‌ ಶೆಟ್ಟಿ ಒಪ್ಪಿಕೊಂಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌ ಹೇಳಿದರು.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜುಲೈ 30ರಂದು ರಾತ್ರಿ ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದಿನ ಕಾಳಾವರ ನಂದಿಕೇಶ್ವರ ಕಛೇರಿಯೊಳಗೆ ಫೈನಾನ್ಸ್ ನಡೆಸಿಕೊಂಡಿದ್ದ. ‘ಅಜೇಂದ್ರ ಶೆಟ್ಟಿಯನ್ನು ಮಾರಕಾಯುಧದಿಂದ ಕಡಿದು ಕೊಲೆ ಮಾಡಿ ಅಜೇಂದ್ರ ಶೆಟ್ಟಿಯ ಕೊರಳಿನಲ್ಲಿದ್ದ ಚಿನ್ನದ ಚೈನ್ ಮತ್ತು ಅವರ ಹೊಸ ಹೊಂಡಾ ಸಿಟಿ ಕಾರನ್ನು ಸುಲಿಗೆ ಮಾಡಿಕೊಂಡು ಹೋಗಿದ್ದು, ಈ ಘಟನೆ ಬಳಿಕ ಈ ಫೈನಾನ್ಸ್ ನಲ್ಲಿ ಪಾಲುಗಾರಿಕೆ ಮಾಡಿಕೊಂಡಿದ್ದ. ಅನೂಪ್ ಶೆಟ್ಟಿಯು ತಲೆಮರೆಸಿಕೊಂಡಿದ್ದರಿಂದ ಈತನ ವಿರುದ್ಧ ಅಜೇಂದ್ರ ಶೆಟ್ಟಿಯ ಅಣ್ಣ ಮಹೇಂದ್ರ ಶೆಟ್ಟಿಯು ನೀಡಿರುವ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಆರೋಪಿಯ ಬಂಧನಕ್ಕಾಗಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಕೆ. ಶ್ರೀಕಾಂತ್ ರವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಮತ್ತು ಬೈಂದೂರು ವೃತ್ತ ನಿರೀಕ್ಷರಾದ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ, ಕುಂದಾಪುರ ಉಪವಿಭಾಗದ ಅಪರಾಧ ಪತ್ತೆ ದಳದ ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಆರೋಪಿಯನ್ನು ಜುಲೈ 31 ರಂದು ಗೋವಾ ರಾಜ್ಯದ ಕೋಲ್ವಾ ಬೀಚ್‌ ಬಳಿ ಬಂಧಿಸಲಾಗಿದೆ ಎಂದರು.

ಆರೋಪಿ ಅನೂಪ್‌ ಶೆಟ್ಟಿ ಈ ಮೊದಲು ದುಬಾಯಿ ಮತ್ತು ಸಿಂಗಾಪೂರದಲ್ಲಿ ಕೆಲಸ ಮಾಡಿಕೊಂಡಿದ್ದು ಬಳಿಕ ಊರಿಗೆ ಮರಳಿ ಅಜೇಂದ್ರ ಶೆಟ್ಟಿಯೊಂದಿಗೆ ಸೇರಿಕೊಂಡು ಫೈನಾನ್ಸ್‌ ವ್ಯವಹಾರ ಮಾಡಿಕೊಂಡಿದ್ದ. ಫೈನಾನ್ಸ್‌ ವ್ಯವಹಾರದಲ್ಲಿ ಇಬ್ಬರಿಗೂ ಆಗಿಂದಾಗ್ಗೆ ಗಲಾಟೆಗಳು ನಡೆದಿದ್ದು ಇದೇ ಕೊಲೆಗೆ ಪ್ರಮುಖ ಕಾರಣವಾಗಿದೆ ಎಂದು ಒಪ್ಪಿಕೊಂಡಿರುತ್ತಾನೆ. ಕೊಲೆಯ ಬಗ್ಗೆ ಇನ್ನಷ್ಟು ಮಾಹಿತಿ ಹೆಚ್ಚಿನ ತನಿಖೆಯ ಬಳಿಕ ತಿಳಿಯಲಿದೆ ಎಂದು ವಿಷ್ಣುವರ್ಧನ್‌ ಹೇಳಿದರು.

ಆತನು ಸುಲಿಗೆ ಮಾಡಿಕೊಂಡು ಹೋಗಿರುವ ಕಾರನ್ನು ವಿಶೇಷ ತಂಡದಲ್ಲಿದ್ದ ಬೈಂದೂರು ಸಿಪಿಐ ರವರು ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ವರದಿಯಾದ 24 ಗಂಟೆಯೊಳಗಾಗಿ ಬೇದಿಸುವಲ್ಲಿ ಯಶಸ್ವಿಯಾಗಿ ಸಾರ್ವಜನಿಕರ ಪ್ರಶಂಸೆಗೊಳಗಾಗಿರುತ್ತಾರೆ ಎಂದರು

ಈ ವಿಶೇಷ ತಂಡದಲ್ಲಿ ಶ್ರೀಧರ್ ನಾಯ್ಕ ಪಿ.ಎಸ್.ಐ. ಶಂಕರನಾರಾಯಣ, ನಂಜನಾಯ್ಕ ಪಿ.ಎಸ್.ಐ. ಗಂಗೊಳ್ಳಿ, ಕುಂದಾಪುರ ಗ್ರಾಮಾಂತರ ಠಾಣೆಯ ಪಿ.ಎಸ್.ಐ. ನಿರಂಜನ ಗೌಡರವರೊಂದಿಗೆ ಉಪವಿಭಾಗದ ಸಿಬ್ಬಂದಿಯವರಾದ ಮೋಹನ, ಚಂದ್ರಶೇಖರ ನಾಗೇಂದ್ರ, ಶ್ರೀನಿವಾಸ, ಸಂತೋಷ್ ಕುಮಾರ್, ಸಂತೋಷ್, ರಾಘವೇಂದ್ರ, ರಾಮು, ಸೀತಾರಾಮ, ಸತೀಶ್, ಚಿದಾನಂದ, ಮಧುಸೂಧನ್ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಯವರಾದ ದಿನೇಶ್‌ ಸಹಕರಿಸಿರುತ್ತಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಬಂಧನಕ್ಕಾಗಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಕೆ. ಶ್ರೀಕಾಂತ್ ರವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಮತ್ತು ಬೈಂದೂರು ವೃತ್ತ ನಿರೀಕ್ಷರಾದ ಸಂತೋಷ ಕಾಯ್ಕಿಣಿ, ಶಂಕರನಾರಾಯಣ ಪಿಎಸ್‌ ಐ ಶ್ರೀಧರ್‌ ನಾಯ್ಕ, ಗಂಗೊಳ್ಳಿ ಪಿಎಸ್‌ ಐ ನಂಜಾನಾಯ್ಕ, ಗ್ರಾಮಾಂತರ ಠಾಣೆಯ ಪಿ.ಎಸ್.ಐ. ನಿರಂಜನ ಗೌಡ ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago