ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬ0ಧಿಸಿದ0ತೆ ಅಡಿಕೆ ಬೆಳೆಯಲ್ಲಿ ಕಂಡು ಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲು ತುತ್ತು ಮತ್ತು ಎಲೆಚುಕ್ಕೆ ರೋಗಕ್ಕೆ ಶಿಫಾರಸ್ಸು ಮಾಡಿರುವ ಸಸ್ಯಸಂರಕ್ಷಣಾ ಔಷಧಿ ಖರೀದಿಗೆ ಪ್ರತಿ ಹೆಕ್ಟೇರ್ ಗೆ ರೂ. 300 ಸಹಾಯಧನ (ಕೇಂದ್ರದ ಪಾಲು ರೂ. 1500/- ಹಾಗೂ ರಾಜ್ಯದ ಪಾಲು ರೂ. 1500/-) ಗರಿಷ್ಠ 2 ಹೆಕ್ಟೇರ್ ಗಳಿಗೆ ರೂ. 6000/-ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು. ಆಸಕ್ತ ರೈತರು ತಾವು ಖರೀದಿಸಿರುವ ಅಧಿಕೃತ ಬಿಲ್ಲಿನೊಂದಿಗೆ ಆರ್.ಟಿ.ಸಿ., ಆಧಾರ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಗಳೊಂದಿಗೆ ಉಡುಪಿ ತಾಲೂಕಿನ ತೊಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ ಮೂಲ್ಕಿ : ಒಂಬತ್ತು…
ಉಡುಪಿ : ತ್ರಾಸಿ - ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ…
ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್ ಉಡುಪಿ…
ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ಜೋಸೆಫ್ ವಿಜಯ್ ಎಚ್ಚರಿಕೆ ಚೆನ್ನೈ: ಮಹಿಳೆಯರ ವಿರುದ್ಧ…
ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ…