Featured

ಉಡುಪಿ : ಅಡುಗೆ ಅನಿಲ ಬೆಲೆ ಏರಿಕೆ – ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ : ವೆರೋನಿಕಾ ಕಾರ್ನೆಲಿಯೋ ಆಕ್ರೋಶ – Vishwanews24

ಅಡುಗೆ ಅನಿಲ ಬೆಲೆ ಏರಿಕೆ – ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ : ವೆರೋನಿಕಾ ಕಾರ್ನೆಲಿಯೋ ಆಕ್ರೋಶ – Vishwanews24

ಉಡುಪಿ: ಅಡುಗೆ ಅನಿಲದ ಮೇಲೆ ಇಂದಿನಿಂದ 50 ರೂ. ಬೆಲೆ ಏರಿಕೆ ಮಾಡಿರುವ ಬಿಜೆಪಿ ಸರ್ಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕಾರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನ ಆರ್ಥಿಕ ಸಂಕಷ್ಟದಲ್ಲಿ ತೊಳಲಾಡುತ್ತಿದ್ದಾರೆ. ಹೀಗಿರುವಾಗ ಜನಸಾಮಾನ್ಯರ ನಿತ್ಯದ ಬದುಕಿಗೆ ಸುಲಭವಾಗುವ ರೀತಿಯಲ್ಲಿ ಬೆಲೆಗಳನ್ನು ಇಳಿಕೆ ಮಾಡಬೇಕಿತ್ತು. ಆದರೆ ದಿನನಿತ್ಯ ಬಳಕೆಯ ಅಡುಗೆ ಅನಿಲದ ಬೆಲೆಯನ್ನು ಏಕಾಏಕಿ 50 ರೂ. ಏರಿಸಿರುವುದು ಖಂಡನೀಯ. ಈಗಾಗಲೇ ಒಂದು ಸಿಲಿಂಡರ್ ಗೆ 1020 ರೂ. ನೀಡುತ್ತಿದ್ದು, ಇನ್ನು ಮುಂದೆ 1070 ರೂ.ಗಳನ್ನು ನೀಡಿ ಸಿಲಿಂಡರ್‍ ಖರೀದಿಸಬೇಕಾಗುತ್ತದೆ. ಕೆಲಸ ಇಲ್ಲದೆ ಪರದಾಡುತ್ತಿರುವ ಜನರಿಗೆ ಇನ್ನಷ್ಟು ತೊಂದರೆ ನೀಡುತ್ತಿರುವ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲವೇ? ಜನರಿಂದ ಆಯ್ಕೆಯಾದ ಸರ್ಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ ನಿರುದ್ಯೋಗ ಸಮಸ್ಯೆ ಶೇ. 7.8ಕ್ಕೆ ತಲುಪಿದ್ದು ಗರಿಷ್ಠ ಏರಿಕೆ ಕಂಡಿದೆ. ಮಳೆಗಾಲ ಆರಂಭವಾಗಿರುವುದರಿಂದ ಹಣಕಾಸಿಗೂ ಕಷ್ಟ ಇದೆ. ಒಪ್ಪೊತ್ತಿನ ಊಟಕ್ಕೂ ಜನ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ತಾಳ್ಮೆ ಪರೀಕ್ಷೆ ಮಾಡದೆ ಕೂಡಲೇ ಬೆಲೆ ಇಳಿಕೆ ಮಾಡಿ ನೆಮ್ಮದಿಯ ಜೀವನ ಸಾಗಿಸಲು ಜನಸಾಮಾನ್ಯರಿಗೆ ಅನುವು ಮಾಡಿಕೊಡಬೇಕು ಎಂದವರು ಆಗ್ರಹಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago