Featured

ಉಡುಪಿ: ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆ : ಸೊರಕೆ – VishwaNews24

ಉಡುಪಿ: ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆ : ಸೊರಕೆ

ಅಭ್ಯರ್ಥಿ ಘೋಷಣೆ ವೇಳೆಯೇ ಪಟಾಕಿ ಸಿಡಿಸಿರುವ ಇವರು ಒಂದು ವೇಳೆ ಗೆದ್ದರೆ ಬಾಂಬ್ ಸ್ಫೋಟಿಸಬಹುದು..

ಉಡುಪಿ, : “ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಡುಪಿಗೆ ಬಂದಿರುವ ಹೆಲಿಕಾಪ್ಟರ್ ಮೂಲಕ ಜಿಲ್ಲೆಗೆ ಅಪಾರ ಪ್ರಮಾಣದ ಹಣದ ಗಂಟನ್ನು ತರಲಾಗಿದೆ”ಎಂದು ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಅವರ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ,”ನನಗೆ ಸಿಕ್ಕಿರುವ ಮಾಹಿತಿಯಂತೆ ಇಂದು ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆಯಾಗಿದೆ. ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆಯೇ ಪಟಾಕಿ ಸಿಡಿಸಿರುವ ಇವರು ಒಂದು ವೇಳೆ ಗೆದ್ದರೆ ಬಾಂಬ್ ಸ್ಫೋಟಿಸಬಹುದು. ಚುನಾವಣೆ ಘೋಷಣೆಗೂ ಮುನ್ನವೇ ನಾವು ನಾಲ್ಕು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ. ಸುಳ್ಳು ಆರೋಪಗಳಿಂದ ಕಳೆದ ನಾವು ಸೋತಿದ್ದೇವೆ” ಎಂದು ಸೊರಕೆ ಹೇಳಿದ್ದಾರೆ.

“ನಾವೂ ಹಿಂದೂಗಳೇ ಹೊರತು ಮೂಲಭೂತವಾದಿಗಳಲ್ಲ. ನಾವು ಪ್ರತಿದಿನವೂ ಪೂಜೆ ಮಾಡುತ್ತೇವೆ. ಕ್ರಿಸ್ತನಿಗೂ ಕೃಷ್ಣನಿಗೂ ಸಾಮ್ಯತೆಗಳಿವೆ. 2014ರಲ್ಲಿ ನಾವು ಮೋದಿಯವರ ಕೈಗೆ ಭಾರತವನ್ನು ಕೊಟ್ಟಾಗ ಭಾರತ ಅಂತರಾಷ್ಟ್ರೀಯ ಬ್ರ್ಯಾಂಡ್ ಆಗಿತ್ತು. ಮೋದಿ ವಿರುದ್ಧ ಸಿಡಿದೆದ್ದ ಏಕೈಕ ವ್ಯಕ್ತಿ ಸಿದ್ದರಾಮಯ್ಯ. ಏಕೆಂದರೆ ಅವರು ನ್ಯಾಯಯುತ ಮತ್ತು ಜನಸ್ನೇಹಿ ಆಡಳಿತ ನೀಡಿದ್ದಾರೆ. ಅವರ ಆಡಳಿತ ಈ ರಾಜ್ಯಕ್ಕೆ ವರದಾನವಾಗಿದೆ. ಪ್ರಮೋದ್ ಮಧ್ವರಾಜ್ ಸೋತಿರುವುದು ಸ್ವಯಂ ತಪ್ಪಿನಿಂದಲೇ ಹೊರತು ಕಾಂಗ್ರೆಸ್ ಕಾರ್ಯಕರ್ತರ ತಪ್ಪಿನಿಂದಲ್ಲ. ನಮ್ಮ ಅಭ್ಯರ್ಥಿ ಪ್ರಸಾದರಾಜ್ ಕಾಂಚನ್ ಅವರು ಬಹಳ ಹಿಂದಿನಿಂದಲೂ ಹೆಚ್ಚಿನ ಉದಾರತೆಯಿಂದ ಕೆಲಸ ಮಾಡಿದವರು. ಅವರಿಗೆ ಉಡುಪಿಯ ನಾಡಿಮಿಡಿತದ ಅರಿವಿದೆ” ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹೇಳಿದರು.

ಇದೇ ಸಂದರ್ಭದಲ್ಲಿ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಲಾಯಿತು.ಬಳಿಕ ಉಡುಪಿ ತಾಲೂಕು ಕಚೇರಿಯಲ್ಲಿ ಪ್ರಸಾದ್‌ರಾಜ್‌ ಕಾಂಚನ್‌ ನಾಮಪತ್ರ ಸಲ್ಲಿಸಿದರು.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago