Featured

ಉಡುಪಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು : ಅಧಿಕಾರಿಗಳಿಗೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ  ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅತಿವೃಷ್ಟಿ ಅವಲೋಕನ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 4 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಭಾಗಶಃ ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನಃ ಪರಿಶೀಲಿಸಿ, ಗರಿಷ್ಠ ಮೊತ್ತದ ಪರಿಹಾರ ವಿತರಿಸುವಂತೆ ಎಲ್ಲ ತಹಸೀಲ್ದಾರ್‌ಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಸಮುದ್ರ ಕೊರೆತ ತಡೆಯುವ ಕುರಿತಂತೆ ಸೂಕ್ತ ಯೋಜನೆ ರೂಪಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಸದರು ಸೂಚಿಸಿದರು. ಮುಂದಿನ ವರ್ಷಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಬಜೆ ಡ್ಯಾಮ್‌ನಲ್ಲಿ ತುಂಬಿರುವ ಹೂಳನ್ನು ತೆಗೆಯುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು.

ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.

 

Vishwa News 24

Recent Posts

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

15 seconds ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

10 minutes ago

ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ ಅಂಡರ್‌ಪಾಸ್  ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…

20 minutes ago

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

32 minutes ago

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ – vishwanews24

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…

35 minutes ago

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಯುವಕ ಅರೆಸ್ಟ್ – vishwanews24

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಕಾಪು ಮೂಲದ ಯುವಕ ಅರೆಸ್ಟ್ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚಿಕೊ0ಡ…

42 minutes ago