Featured

ಉಡುಪಿ : ಅದಾನಿ ಉಷ್ಣವಿದ್ಯುತ್ ಸ್ಥಾವರದ ಪರಿಸರ ಹಾನಿ – 52 ಕೋಟಿ ರೂ. ದಂಡ ವಿಧಿಸಿದ ಚೆನ್ನೈನ ರಾಷ್ಟ್ರೀಯ ಹಸಿರು ಪೀಠ – Vishwanews24

ಉಡುಪಿ : ಅದಾನಿ ಉಷ್ಣವಿದ್ಯುತ್ ಸ್ಥಾವರದ ಪರಿಸರ ಹಾನಿ – 52 ಕೋಟಿ ರೂ. ದಂಡ ವಿಧಿಸಿದ ಹಸಿರು ಪೀಠ

ಉಡುಪಿ : ಅದಾನಿ ಆಡಳಿತದ ಉಡುಪಿಯ ಉಷ್ಣವಿದ್ಯುತ್ ಸ್ಥಾವರಕ್ಕೆ ತನ್ನ 10 ಕಿ.ಮೀ. ವ್ಯಾಪ್ತಿಯಲ್ಲಿ ಮಾಡಿರುವ ಪರಿಸರ ಹಾನಿಗಾಗಿ 52 ಕೋಟಿ ರೂ. (52,02,50,000ರೂ.) ದಂಡವನ್ನು ಪರಿಹಾರ ರೂಪದಲ್ಲಿ ಪಾವತಿಸು ವಂತೆ ಚೆನ್ನೈನ ರಾಷ್ಟ್ರೀಯ ಹಸಿರು ಪೀಠ ಆದೇಶ ನೀಡಿದೆ.

ಹಸಿರು ಪೀಠ ಈ ಹಿಂದೆ ಎರಡೆರಡು ಸಮಿತಿಗಳನ್ನು ಪರಿಸರಕ್ಕಾದ ಹಾನಿಯ ಅಂದಾಜಿಗೆ ರಚಿಸಿ ಸ್ಥಳಕ್ಕೆ ಕಳುಹಿಸಿದ್ದರೂ, ಅವುಗಳು ನೀಡಿದ ವರದಿ ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡಲು ವಿಫಲವಾಗಿತ್ತು. ಒಂದು ಸಮಿತಿ ಕೇವಲ 4.89 ಕೋಟಿ ರೂ. ದಂಡವನ್ನು ಕಂಪೆನಿಗೆ ವಿಧಿಸುವಂತೆ ವರದಿಯಲ್ಲಿ ತಿಳಿಸಿತ್ತು. ಇದರ ವಿರುದ್ಧ ನಂದಿಕೂರು ಜನಜಾಗೃತಿ ಸಮಿತಿ ಮೇಲ್ಮನವಿ ಸಲ್ಲಿಸಿದ್ದು, ಇದರಂತೆ ಹಸಿರು ಪೀಠದಿಂದ ನೇಮಕಗೊಂಡ ಮತ್ತೊಂದು ಸಮಿತಿ ಒಟ್ಟಾರೆಯಾಗಿ 74.93 ಕೋಟಿ ರೂ. ಪರಿಹಾರ ನೀಡುವಂತೆ ವರದಿಯಲ್ಲಿ ತಿಳಿಸಿತ್ತು.

ಕಳೆದ ಸುಮಾರು ಮೂರು ದಶಕಗಳಿಗೂ ಅಧಿಕ ಸಮಯದಿಂದ ಪಡುಬಿದ್ರಿ ಪರಿಸರದಲ್ಲಿ ಉಷ್ಣವಿದ್ಯುತ್ ಸ್ಥಾವರ ಸ್ಥಾಪನೆ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿರುವ ಬಾಲಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯ ನಂದಿಕೂರು ಜನಜಾಗೃತಿ ಸಮಿತಿ ರಾ.ಹಸಿರು ಪೀಠದ ದಕ್ಷಿಣ ವಲಯ ಪೀಠದ ಮುಂದೆ ಹೂಡಿದ ವ್ಯಾಜ್ಯದ ಕುರಿತಂತೆ ಪೀಠ ತನ್ನ ಅಂತಿಮ ತೀರ್ಪನ್ನು ನೀಡಿದೆ.

ಹಾಗೂ ಈ ಪರಿಸರದಲ್ಲಿ ರೈತರಿಗೆ ಆಗಿರಬಹುದಾದ ಕೃಷಿ ಹಾನಿಯ ಕುರಿತಂತೆಯೂ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳ ನೇತೃತ್ವದ ವಿಶೇಷ ಸಮಿತಿಯೊಂದನ್ನು ಸಹ ರಚಿಸಿ ಹಸಿರು ಪೀಠ ಆದೇಶ ನೀಡಿದೆ. ಸಮಿತಿ ನೀಡುವ ವರದಿಯಾಧಾರದಲ್ಲಿ ಕೃಷಿ ಹಾನಿಯ ಮೊತ್ತವನ್ನು ಸಹ ಯುಪಿಸಿಎಲ್ ಸಂತ್ರಸ್ಥ ರೈತರಿಗೆ ಪಾವತಿಸಬೇಕು ಎಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

14 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

15 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago