Featured

ಉಡುಪಿ: ಅಧಿಕಾರದ ಅಮಲಿನಲ್ಲಿ ಏನೇ ಮಾಡಿದರೂ ನಡೆಯುತ್ತದೆ ಎನ್ನುವುದು ಸರಿಯಲ್ಲ: ಸರಕಾರಕ್ಕೆ ವಜ್ರದೇಹಿ ಸ್ವಾಮೀಜಿ – Vishwanews24

ಉಡುಪಿ: ಅಧಿಕಾರದ ಅಮಲಿನಲ್ಲಿ ಏನೇ ಮಾಡಿದರೂ ನಡೆಯುತ್ತದೆ ಎನ್ನುವುದು ಸರಿಯಲ್ಲ:  ಸರಕಾರಕ್ಕೆ ವಜ್ರದೇಹಿ ಸ್ವಾಮೀಜಿ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆದಿರುವುದನ್ನು ವಿರೋಧಿಸಿ ವಿಶ್ವಹಿಂದು ಪರಿಷತ್ ಹಾಗೂ ಬಜರಂಗದಳ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪತ್ರಿಭಟನೆ ನಡೆಸಿ, ರಾಜ್ಯ ಸರಕಾರದ ನಿರ್ಧಾರಕ್ಕೆ ಧಿಕ್ಕಾರ ಘೋಷಿಸಿದರು.

ವಜ್ರಾದೇಹಿಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಮಾತನಾಡಿ, ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿಯವರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರದ ಅಮಲಿನಲ್ಲಿ ಏನೇ ಮಾಡಿದರೂ ನಡೆಯುತ್ತದೆ ಎನ್ನುವುದು ಸರಿಯಲ್ಲ. ಹಿಂದು ಧರ್ಮದ ಅವಹೇಳನ ಮಾಡುವುದನ್ನು ಬಿಟ್ಟು ಅಧಿಕಾರ ನಡೆಸಿ, ಸಮಾಜದ ಉನ್ನತಿ, ಸಮುದಾಯದ ಏಳ್ಗೆಗಾಗಿ ಕೆಲಸ ಮಾಡಿ, ಹಿಂದುಗಳ ಧಮನ ನೀತಿ ಕೈಬಿಡಿ. ಇಲ್ಲವಾದರೆ ಮುಂದಿನ ಆರು ತಿಂಗಳಲ್ಲಿ ಉತ್ತರ ಸಿಗಲಿದೆ ಎಂದರು. ರಾಜ್ಯದ ಮಠಾಧೀಶರು ಹಿಂದು ಸಮಾಜವನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಒಂದಾಗಬೇಕು ಎಂದು ಮನವಿ ಮಾಡಿದರು.

ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್. ಮಾತನಾಡಿ, ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯ ಸರಕಾರ ವಾಪಸ್ ಪಡೆಯುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಹಿಂದು ವಿರೋಧಿ ನೀತಿಯನ್ನು ಮುನ್ನೆಲೆಗೆ ತರುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡುತ್ತಿದೆ. ದೇಶದಲ್ಲಿ 60 ವರ್ಷಕ್ಕೂ ಹೆಚ್ಚುಕಾಲ ಸರಕಾರಗಳು ಅಲ್ಪಸಂಖ್ಯಾಕರ ಪರವಾಗಿ ತುಷ್ಠೀಕರಣ ಮಾಡಿದೆ. ತತ್ ಕ್ಷಣ ಸರಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕು. ಮುಂದೆ ಉಗ್ರ ಹೋರಾಟ ಮಾಡಲಿದ್ದೇವೆ. ಪಠ್ಯ ಪರಿಷ್ಕರಣೆ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ವಿಷ್ಣುಮೂರ್ತಿ ಆಚಾರ್ಯ, ವಿಎಚ್ ಪಿ ಜಿಲ್ಲಾ ದಿನೇಶ್ ಮೆಂಡನ್, ಶಾಸಕರಾದ ಯಶ್ ಪಾಲ್ ಸುವರ್ಣ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪ್ರಮುಖರಾದ ಚೇತನ್ ಪೇರಲ್ಕೆ, ಕೆ. ಉದಯ ಕುಮಾರ್ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ರಾಘವೇಂದ್ರ ಕಿಣಿ, ಶ್ಯಾಮಲಾ ಕುಂದರ್, ಸುಮಿತ್ರಾ ಆರ್. ನಾಯಕ್, ಅಂಡಾರು ದೇವಿ ಪ್ರಸಾದ್ ಶೆಟ್ಟಿ ಸಹಿತ ವಿಎಚ್ ಪಿ, ಬಜರಂಗದಳ, ಬಿಜೆಪಿಯ ಪ್ರಮುಖರು ಪ್ರತಿಭಟನೆಯಲ್ಲಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago