ಉಡುಪಿ: ಬ್ಯಾಂಕ್ ಮ್ಯಾನೇಜರ್‌ವೊಬ್ಬರಿಗೆ ಅಧಿಕ ಲಾಭಾಂಶದ ಆಮಿಷವೊಡ್ಡಿದ ಆನ್‌ಲೈನ್ ವಂಚಕರು ಅವರ ಖಾತೆಯಿಂದಲೇ 14 ಲಕ್ಷ ರೂ.ಗಳನ್ನು ಹಂತ-ಹಂತವಾಗಿ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ದೊಂಡೇರಂಗಡಿಯಲ್ಲಿರುವ ಬ್ಯಾಂಕೊಂದರ ಮ್ಯಾನೇಜರ್ ಪವನ್ ಕುಮಾರ್ ವಂಚನೆಗೆ ಒಳಗಾದವರು. ಯಾರೋ ಅಪರಿಚಿತರು ಪವನ್ ಕುಮಾರ್ ಅವರನ್ನು C22 Investment Alliance Trading ಎಂಬ ವಾಟ್ಸಾಪ್ ಗ್ರೂಪ್‌ಗೆ ಸೇರ್ಪಡೆ ಮಾಡಿದ್ದರು.
ಅನಂತರ ಅವರ ಮೊಬೈಲ್‌ನಿಂದ ಷೇರು ಮಾರುಕಟ್ಟೆಯ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಪವನ್ ಕುಮಾರ್ ಅವರನ್ನು ನಂಬಿಸಿ ಹೆಚ್ಚಿನ ಲಾಭಾಂಶ ಪಡೆಯಬಹುದೆಂಬ ಆಸೆ ತೋರಿಸಿದ್ದಾರೆ. ಬಳಿಕ Causeway App ಮೂಲಕ ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದಾರೆ.
ಇದನ್ನು ನಂಬಿದ ಅವರು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗ ಳಿಗೆ ಅ.7ರಿಂದ 19ರವರೆಗೆ ಹಂತ ಹಂತವಾಗಿ 14,00,000 ರೂ.ಗಳನ್ನು ಹೂಡಿಕೆ ಮಾಡಿದ್ದಾರೆ. ಆದರೆ ಆರೋಪಿಗಳು ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೆ ವಂಚನೆ ಎಸಗಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…