ಉಡುಪಿ: ಅನಧಿಕೃತ ಮರಳು ದಾಸ್ತಾನು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ: ಜಿಲ್ಲೆಯಲ್ಲಿ ಸಿಆರ್ ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಅವಧಿಯು ಮುಕ್ತಾಯಗೊಂಡಿದ್ದು, ಈ ಅವಧಿಯಲ್ಲಿ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆದು ವಿತರಿಸಲಾಗಿದೆ. ಪ್ರಸ್ತುತ ತೆಗೆದಿರುವ ಮರಳು ಜಿಲ್ಲೆಯಿಂದ ಹೊರ ಹೋಗಲು ಅವಕಾಶ ನೀಡಿಲ್ಲ. ಆದರೆ ತೆಗೆದಿರುವ ಅಷ್ಟೂ ಮರಳು ಸಾರ್ವಜನಿಕರಿಗೆ ಸಂಪೂರ್ಣವಾಗಿ ವಿತರಣೆಯಾಗದೇ, ಅನಧಿಕೃತವಾಗಿ ದಾಸ್ತಾನು ಮಾಡಿರುವ ಸಾಧ್ಯತೆಯಿದ್ದು, ಹೀಗೆ ಅನಧಿಕೃತವಾಗಿ ಮರಳು ದಾಸ್ತಾನು ಮಾಡಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ದ ಕ್ರಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅನಧಿಕೃತ ಮರಳು ದಾಸ್ತಾನು ಪತ್ತೆ ಹಚ್ಚಲು, ಮರಳು ತುಂಬಿದ ವಾಹನಗಳು ಸ್ಟಾಕ್ ಯಾರ್ಡ್ ನಿಂದ ಹೊರಟಿರುವ ಮತ್ತು ಮರಳು ವಿತರಣೆ ಮಾಡಿರುವ ಪ್ರದೇಶಗಳ ಮಾಹಿತಿಯನ್ನು, ಮರಳು ಸಾಗಾಟ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ಮೂಲಕ ಪತ್ತೆಹಚ್ಚಲಾಗುತ್ತಿದೆ. ಅನಧಿಕೃತವಾಗಿ ಮರಳು ದಾಸ್ತಾನು ಮಾಡಿರುವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದರು.

ಜಿಲ್ಲೆಯಲ್ಲಿ ಕೆಸಿಝಡ್‍ಎಂಎ ಮೂಲಕ ಇನ್ನೂ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆಯಲು ಪ್ರಸ್ಥಾವನೆಯನ್ನು ಅನುಮೋದನೆಗೆ ಕಳುಹಿಸಿದ್ದು, ಶೀಘ್ರದಲ್ಲಿ ಅನುಮೋದನೆ ದೊರೆಯಲಿದೆ. ಅನುಮೋದನೆ ನಂತರ ಮರಳು ವಿತರಣೆ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago