ಉಡುಪಿ: ಜಿಲ್ಲೆಯಲ್ಲಿ ಸಿಆರ್ ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಅವಧಿಯು ಮುಕ್ತಾಯಗೊಂಡಿದ್ದು, ಈ ಅವಧಿಯಲ್ಲಿ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆದು ವಿತರಿಸಲಾಗಿದೆ. ಪ್ರಸ್ತುತ ತೆಗೆದಿರುವ ಮರಳು ಜಿಲ್ಲೆಯಿಂದ ಹೊರ ಹೋಗಲು ಅವಕಾಶ ನೀಡಿಲ್ಲ. ಆದರೆ ತೆಗೆದಿರುವ ಅಷ್ಟೂ ಮರಳು ಸಾರ್ವಜನಿಕರಿಗೆ ಸಂಪೂರ್ಣವಾಗಿ ವಿತರಣೆಯಾಗದೇ, ಅನಧಿಕೃತವಾಗಿ ದಾಸ್ತಾನು ಮಾಡಿರುವ ಸಾಧ್ಯತೆಯಿದ್ದು, ಹೀಗೆ ಅನಧಿಕೃತವಾಗಿ ಮರಳು ದಾಸ್ತಾನು ಮಾಡಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ದ ಕ್ರಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅನಧಿಕೃತ ಮರಳು ದಾಸ್ತಾನು ಪತ್ತೆ ಹಚ್ಚಲು, ಮರಳು ತುಂಬಿದ ವಾಹನಗಳು ಸ್ಟಾಕ್ ಯಾರ್ಡ್ ನಿಂದ ಹೊರಟಿರುವ ಮತ್ತು ಮರಳು ವಿತರಣೆ ಮಾಡಿರುವ ಪ್ರದೇಶಗಳ ಮಾಹಿತಿಯನ್ನು, ಮರಳು ಸಾಗಾಟ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ಮೂಲಕ ಪತ್ತೆಹಚ್ಚಲಾಗುತ್ತಿದೆ. ಅನಧಿಕೃತವಾಗಿ ಮರಳು ದಾಸ್ತಾನು ಮಾಡಿರುವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದರು.
ಜಿಲ್ಲೆಯಲ್ಲಿ ಕೆಸಿಝಡ್‍ಎಂಎ ಮೂಲಕ ಇನ್ನೂ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆಯಲು ಪ್ರಸ್ಥಾವನೆಯನ್ನು ಅನುಮೋದನೆಗೆ ಕಳುಹಿಸಿದ್ದು, ಶೀಘ್ರದಲ್ಲಿ ಅನುಮೋದನೆ ದೊರೆಯಲಿದೆ. ಅನುಮೋದನೆ ನಂತರ ಮರಳು ವಿತರಣೆ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…