ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್ಝಡ್ ಪ್ರದೇಶ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು, ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಹಾಗೂ ಬಜೆ ಡ್ಯಾಮ್ನಲ್ಲಿ ಹೂಳೆತ್ತಿ, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಬೇರ್ಪಡಿಸಿ ವಿಲೇವಾರಿ ಮಾಡುವ ಬಗ್ಗೆ ಕ್ರಮವಹಿಸಲಾಗುತ್ತಿದ್ದು, ಪಿ.ಡಬ್ಲ್ಯೂ.ಡಿ ಗುತ್ತಿಗೆದಾರರು, ಸಾರ್ವಜನಿಕರು ಕಾಮಗಾರಿಗಳಿಗನುಸಾರ ಅಗತ್ಯತೆಗಳಿಗನುಗುಣವಾಗಿ ಮರಳನ್ನು ಪಡೆಯಬಹುದಾಗಿದೆ. ಇದನ್ನು ಹೊರತುಪಡಿಸಿ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಆದೇಶಿಸಲಾಗಿರುತ್ತದೆ.
ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ವಿರುದ್ಧ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಪ್ರಾರಂಭವಾದ ನಂತರ ನ್ಯಾಯಾಲಯದಲ್ಲಿ ಒಒಆಖ ಂಛಿಣ ರಡಿಯಲ್ಲಿ ಹಾಗೂ ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿ 1994 ರನ್ವಯ 23 ಖಾಸಗಿ ದೂರು ದಾಖಲಿಸಲಾಗಿರುತ್ತದೆ.
ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಬಗ್ಗೆ ಮಾಹಿತಿ ಬರುತ್ತಿರುವುದರಿಂದ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅದಾಗ್ಯೂ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ ಅಥವಾ ದಾಸ್ತಾನು ಮಾಡುವುದು ಪುನರಾವರ್ತಿತವಾದಲ್ಲಿ ನಿಯಮಾನುಸಾರ ಗೂಂಡಾ ಕಾಯ್ದೆರಡಿಯಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…