Featured

ಉಡುಪಿ : ಅನಧಿಕೃತ ಮರಳು ಸಾಗಾಣಿಕೆ ಕಂಡುಬಂದಲ್ಲಿ ಕಠಿಣ ಕ್ರಮ : ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್ಝಡ್ ಪ್ರದೇಶ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು, ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಹಾಗೂ ಬಜೆ ಡ್ಯಾಮ್ನಲ್ಲಿ ಹೂಳೆತ್ತಿ, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಬೇರ್ಪಡಿಸಿ ವಿಲೇವಾರಿ ಮಾಡುವ ಬಗ್ಗೆ ಕ್ರಮವಹಿಸಲಾಗುತ್ತಿದ್ದು, ಪಿ.ಡಬ್ಲ್ಯೂ.ಡಿ ಗುತ್ತಿಗೆದಾರರು, ಸಾರ್ವಜನಿಕರು ಕಾಮಗಾರಿಗಳಿಗನುಸಾರ ಅಗತ್ಯತೆಗಳಿಗನುಗುಣವಾಗಿ ಮರಳನ್ನು ಪಡೆಯಬಹುದಾಗಿದೆ. ಇದನ್ನು ಹೊರತುಪಡಿಸಿ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಆದೇಶಿಸಲಾಗಿರುತ್ತದೆ.

ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ವಿರುದ್ಧ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಪ್ರಾರಂಭವಾದ ನಂತರ ನ್ಯಾಯಾಲಯದಲ್ಲಿ ಒಒಆಖ ಂಛಿಣ ರಡಿಯಲ್ಲಿ ಹಾಗೂ ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿ 1994 ರನ್ವಯ 23 ಖಾಸಗಿ ದೂರು ದಾಖಲಿಸಲಾಗಿರುತ್ತದೆ.

ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಬಗ್ಗೆ ಮಾಹಿತಿ ಬರುತ್ತಿರುವುದರಿಂದ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅದಾಗ್ಯೂ ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ ಅಥವಾ ದಾಸ್ತಾನು ಮಾಡುವುದು ಪುನರಾವರ್ತಿತವಾದಲ್ಲಿ ನಿಯಮಾನುಸಾರ ಗೂಂಡಾ ಕಾಯ್ದೆರಡಿಯಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

6 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

11 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

11 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

11 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago