Featured

ಉಡುಪಿ:  ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ – vishwanews24

ಉಡುಪಿ:  ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ

ಉಡುಪಿ: ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮAಡಳಿಗಳು/ ನಿಗಮಗಳು/ ಸ್ವಾಯತ್ತತೆ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ಆದಾಯ ತೆರಿಗೆ/ ಸೇವಾತೆರಿಗೆ/ ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ವಾರ್ಷಿಕ ಆದಾಯ ಇರುವ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಪಡೆಯಲು (ಬಿ.ಪಿ.ಎಲ್) ಅರ್ಹರಿರುವುದಿಲ್ಲ.

ಸರ್ಕಾರ ನಿಗಧಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ಹೊಂದಿರುವ ಸಾರ್ವಜನಿಕರು ತಕ್ಷಣವೇ ತಾಲೂಕಿನ ತಹಶೀಲ್ದಾರರ ಕಛೇರಿಗೆ ಪಡಿತರ ಚೀಟಿಯನ್ನು ಒಪ್ಪಿಸಿ ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿ ಪಡೆಯಬೇಕು. ಜಿಲ್ಲಾ ಮಟ್ಟದಲ್ಲಿ ಅನರ್ಹ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ತಪಾಸಣಾ ತಂಡವನ್ನು ರಚಿಸಲಾಗುತ್ತಿದ್ದು, ತಪಾಸಣಾ ಸಮಯದಲ್ಲಿ ಅನರ್ಹರು ಎಂದು ಕಂಡು ಬಂದಲ್ಲಿ ಅವರು ಪಡೆದಿರುವ ಆಹಾರಧಾನ್ಯಕ್ಕೆ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಸೂಲಾತಿ ಮಾಡುವುದರೊಂದಿಗೆ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಕರ್ನಾಟಕ ಅನಧಿಕೃತ ಪಡಿತರ ಚೀಟಿ (Prevention of Unauthorised Possesion of Rations Cards)  ಆದೇಶ 1977ರಡಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago