Featured

ಉಡುಪಿ: ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಪಡಿತರ ಚೀಟಿಗೆ ಇ-ಕೆವೈಸಿ ಕಡ್ಡಾಯ ..

ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಅನ್ನಭಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ನ್ನು ಆರ್ಥಿಕವಾಗಿ ಸಧೃಡವಾದ ಕೆಲವು ಕುಟುಂಬಗಳು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆಯುವ ಬಗ್ಗೆ ಮಾನದಂಡವನ್ನು ಉಲ್ಲಂಘಿಸಿ, ಸುಳ್ಳು ಮಾಹಿತಿ ನೀಡಿ, ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡುಬ0ದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡ್ನ್ನು ಪತ್ತೆಹಚ್ಚಿ ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸಧೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್ನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ.

ಇದನ್ನೂ ಓದಿ : ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ, ರಿಕ್ಷಾ ಚಾಲಕ ದಾರುಣ ಸಾವು -Vishwanews24

ತಪ್ಪಿದಲ್ಲಿ ಸರ್ಕಾರ ನಿಗಧಿಪಡಿಸಿರುವ ಮಾನದಂಡ ವಿರುದ್ಧವಾಗಿ ಪಡೆದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವುದು ಕಾನೂನು ಬಾಹಿರವಾಗಿದ್ದು, ಅಂತವರ ವಿರುದ್ಧ ಕ್ರಮ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿಗೆ ಇ-ಕೆವೈಸಿ ಕಡ್ಡಾಯ 

ಉಡುಪಿ : ಜಿಲ್ಲೆಯ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವವರು ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾ0ಶದಲ್ಲಿ ಬಯೋ ದೃಡೀಕರಣ ನೀಡಿ, ಇ-ಕೆವೈಸಿ ಮಾಡಲು ಪ್ರತಿ ತಿಂಗಳ 1 ರಿಂದ 10 ನೇ ತಾರೀಖಿನ ವರೆಗೆ ತಂತ್ರಾ0ಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಈವರೆಗೆ ಇ-ಕೆವೈಸಿ ಆಗದೇ ಇರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಡೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಜಿಲ್ಲೆಯಲ್ಲಿ ಏ.16 ರಿಂದ 30 ರವರೆಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

5 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago