ಉಡುಪಿ: ಸಾಂಪ್ರದಾಯಿಕ ವಾತಾವರಣದಲ್ಲಿ ಸಂಪ್ರದಾಯ ಬದ್ಧವಾಗಿ ಅಧಿಕಾರಿಗಳೇ ಸಂಬಂಧಿಕರ ಸ್ಥಾನದಲ್ಲಿ ನಿಂತು ಅನಾಥ ಯುವತಿಯನ್ನು ಧಾರೆಯೆರೆದು ಕೊಟ್ಟು ಆಕೆಯ ಬಾಳಿಗೆ ಬೆಳಕು ನೀಡಿದ್ದು ವಿಶೇಷವಾಗಿತ್ತು.
ಮನೆಯವರಿಂದ ದೂರವಾಗಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ನಿಟ್ಟೂರು ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿರುವ 25ರ ಹರೆಯದ ಯುವತಿ ಜಯಶ್ರಿಯನ್ನು ಹೊರ ಜಿಲ್ಲೆಯ ಕೃಷಿ ಕುಟುಂಬದ ಹಿನ್ನೆಲೆಯ 29ರ ಹರೆಯದ ಯುವಕ ಮಲ್ಲೇಶ ಡಿ.ಎಲ್. ಅವರ ವಿವಾಹ ಅ. ೨೮ ರ ಶುಕ್ರವಾರ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ವತಿಯಿಂದ ಉಡುಪಿ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು.
ಮಲ್ಪೆ : ಚಲಿಸುತ್ತಿರುವ ಬೋಟ್ ಗಳಲ್ಲಿ ಸಾವಿರಾರು ಗಾಯಕರಿಂದ ಕೋಟಿ ಕಂಠ ಗಾಯನ – Vishwanews24
ಅನಾಥ ಯುವತಿಯನ್ನು ವಿವಾಹವಾಗುವುದಾಗಿ ಯುವಕನೇ ಮದುವೆಯ ಪ್ರಸ್ತಾವ ಇಟ್ಟ ಹಿನ್ನಲೆ, ಆತನ ಜಿಲ್ಲೆಯ ಅಧಿಕಾರಿಗಳ ಮೂಲಕ ಯುವಕನ ಗುಣ-ನಡತೆ, ಕುಟುಂಬಿಕರ ಬಗ್ಗೆ ಮಾಹಿತಿ ಕಲೆಹಾಕಲಾಯಿತು. ಈ ವರದಿಗಳನ್ನು ರಾಜ್ಯ ಮಹಿಳಾ ನಿಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿ ಅನುಮೋದನೆ ನೀಡಿತ್ತು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ವಿವಾಹಕ್ಕೆ ಒಪ್ಪಿಗೆ ನೀಡಿದ್ದರು.
ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ..ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24
ಕರ್ನಾಟಕದ ಸರಕಾರದ ಲಾಂಛನ, ಆದಿ ಪೂಜಿತ ಗಣಪತಿ ದೇವರ ಚಿತ್ರದೊಂದಿಗೆ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ಆಯೋಜಕರು. ವಧು-ವರನ ಹೆಸರು ಮುದ್ರಿಸಿ, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ , ಸೇರಿದಂತೆ ಅಧಿಕಾರಿ, ಸಿಬಂದಿ ವರ್ಗಕ್ಕೆ ಆಮಂತ್ರಣ ಪತ್ರಿಕೆ ಹಂಚಲಾಯಿತು. ಇಂದು ಹಲವು ದಾನಿಗಳ ಸಹಕಾರದೊಂದಿಗೆ ಅನಾಥ ಯುವತಿಯ ವಿವಾಹ ಅದ್ದೂರಿಯಾಗಿ ನೆರವೇರಿದೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…