Featured

ಉಡುಪಿ : ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹ ; ಜಿಲ್ಲಾಧಿಕಾರಿಯಿಂದ ಕನ್ಯಾದಾನ – vishwanews24

ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾಯಿತು ಉಡುಪಿಯ ರಾಜ್ಯ ಮಹಿಳಾ ನಿಲಯ

ಉಡುಪಿ : ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹಕ್ಕೆ ಉಡುಪಿಯ ರಾಜ್ಯ ಮಹಿಳಾ ನಿಲಯ ಸಾಕ್ಷಿಯಾಗಿದೆ. ಜಿಲ್ಲಾಡಳಿತ ನೇತೃತ್ವದಲ್ಲಿ ಇಬ್ಬರ ವಿವಾಹ ಕಾರ್ಯಕ್ರಮ ನೆರವೇರಿದ್ದು, ಜಿಲ್ಲಾಧಿಕಾರಿಯೇ ಮುಂದೆ ನಿಂತು ಕನ್ಯಾದಾನ ಮಾಡಿದ್ದು ವಿಶೇಷವಾಗಿತ್ತು. ಆ ಮೂಲಕ ರಾಜ್ಯ ಮಹಿಳಾ ನಿಲಯದಲ್ಲಿ ಈವರೆಗೆ ನೆರವೇರಿದ ಮದುವೆಗಳ ಸಂಖ್ಯೆ 25ರ ಗಡಿ ತಲುಪಿತು.

ಕಿವಿ ಕೇಳಿಸದ, ಮಾತು ಬಾರದ ಅನಾಥ ಯುವತಿಯ ಬಾಳಿಗೆ ಹಾಸನದ ಕೃಷಿಕ ಬೆಳಕಾಗಿ ಬಂದರೆ, ವಿವಾಹವಾದ ಮತ್ತೋರ್ವ ಯುವತಿ ಈಗ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ. ಎಂಕಾಂ ಮಾಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ಯುವಕನ ಜೊತೆ ಈಕೆ ಸಪ್ತಪದಿ ತುಳಿದಿದ್ದು, ಆಕೆಯ ಮುಂದಿನ ಓದಿನ ಜವಾಬ್ದಾರಿಯನ್ನೂ ಆತ ಹೊತ್ತಿದ್ದಾನೆ. ವಿದ್ಯಾಭ್ಯಾಸ ಮಾಡುತ್ತಿರುವ ಹುಡುಗಿಗೆ ಉದ್ಯೋಗಸ್ಥ ಯುವಕನೇ ಬೇಕೆಂದು ಕಾದು ಕುಳಿತು ರಾಜ್ಯ ಮಹಿಳಾ ನಿಲಯ ಮದುವೆ ಮಾಡಿಸಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರೇ ಮುಂದೆನಿಂತು ಮದುವೆಕಾರ್ಯ ನೆರವೇರಿಸಿದ್ದು, ಕನ್ಯಾದಾನ ಮಾಡಿದ್ದಾರೆ. ನವ ವಿವಾಹಿತರಿಗೆ ಆರತಿಯನ್ನೂ ಬೆಳಗಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಮದುವೆಗೆ ಹಾಜರಾಗಿದ್ದು, ನವ ವಿವಾಹಿತರ ಹೆಸರಿಗೆ 50 ಸಾವಿರ ರೂ. ಹಣ ಡೆಪಾಸಿಟ್ ಕೂಡ ಮಾಡಲಾಗಿದೆ. ಇದು ಸ್ವರ್ಗದಲ್ಲಿ ನಿಶ್ಚಯವಾದ ಮದುವೆ ಎಂದು ನೆರೆದಿದ್ದವರು ಹೇಳಿದ್ದಾರೆ. ಇನ್ನು ಬ್ರಾಹ್ಮಣ ಸಮುದಾಯ ಸೇರಿ ಕೃಷಿಕ ಕುಟುಂಬಗಳ ಯುವಕರಿಗೆ ಮದುವೆಯಾಗಲು ಕನ್ಯೆಯರ ಅಭಾವ ಹಿನ್ನಲೆ ಮದುವೆಗೆ ಕನ್ಯೆಯರಿಗೆ ಆಗ್ರಹಿಸಿ ಉಡುಪಿ ರಾಜ್ಯ ಮಹಿಳಾ ನಿಲಯಕ್ಕೆ ಅತೀ ಹೆಚ್ಚು ಬೇಡಿಕೆ ಬರುತ್ತಿವೆ ಎನ್ನಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago