ಉಡುಪಿ: ಪೊಲೀಸರ ಸೂಕ್ತ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾದೀಕ್ ಅಹಮ್ಮದ್(40), ಅಫ್ರೋಜ್‌ಕೆ (39), ಇಲಿಯಾಸ್ ಸಾಹೇಬ್(46), ಇರ್ಷಾದ್(37), ಫಯಾಜ್ ಅಹಮ್ಮದ್(39), ಮಹಮ್ಮದ್ ಅಶ್ರಫ್(43), ಎ. ಹಾರೂನ್ ರಶೀದ್, ಮೊಹಮ್ಮದ್ ಜುರೈಜ್ (42), ಇಶಾಕ್ ಕಿದ್ವಾಯಿ (30), ಶೌಕತ್‌ಅಲಿ (31), ಮಹಮ್ಮದ್ ಝಹೀದ್(24) ಇವರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸಪ್ಟೆಂಬರ್ 22ರಂದು ಪ್ರಮೋದ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರು, ಉಡುಪಿ ನಗರ ಪೊಲೀಸ್ ಠಾಣೆ ಇವರು ಠಾಣೆಯಲ್ಲಿರುವಾಗ ಉಡುಪಿಯ ಡಯಾನಾ ಸರ್ಕಲ್ ಬಳಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಪರವಾನಿಗೆ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿರುವ ಕುರಿತು ಮಾಹಿತಿ ದೊರೆತಿದ್ದು ಸ್ಥಳಕ್ಕೆ ತೆರಳಿದ್ದು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಸಂಘಟನೆಗಳ ಕಚೇರಿ ಹಾಗೂ ಮನೆಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನೆಡಸುತ್ತಿರುವುದು ಕಂಡುಬಂದಿದ್ದು, ಪ್ರತಿಭಟನೆಗೆ ಯಾವುದೇ ಪರವಾನಿಗೆ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಸ್ಥಳದಿಂದ ಹೋಗಲು ಸೂಚನೆ ನೀಡಿದರೂ ತೆರಳದೆ ಇದ್ದ ವೇಳೆ 11 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಮುಂದಿನ ವಿಚಾರಣೆ ನಡೆಯುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…