ಉಡುಪಿ : ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳ ಮುಖಿಯರನ್ನು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಡಿ.15ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ತಾವೇ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಇಬ್ಬರು ಪಿಂಪ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು, ವಾಹನ ಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ, ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಈ ಕಾರ್ಯಾಚರಣೆಗೆ ಇಳಿದಿದ್ದರು. ಸ್ವತಃ ಎಸ್ಪಿಯವರೇ ಸ್ಥಳಕ್ಕೆ ಆಗಮಿಸಿ ಮಂಗಳಮುಖಿಯನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದರು.
ಎಸ್ಪಿ ಎಂಬುದನ್ನು ತಿಳಿಯದ ಕೆಲವು ಮಂಗಳ ಮುಖಿಯರು ಎಸ್ಪಿ ಜೊತೆ ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ಬೈದರೆನ್ನಲಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುಸಿದರು.
ಈ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…