ಉಡುಪಿ: ರಾಜ್ಯ ಸರ್ಕಾರದ ಪ್ರತಿಷ್ಠಿತ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಪ್ರಧಾನಿ ನರೇಂದ್ರ ಮೋದಿಯವರು ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆರೋಪಿಸಿದರು.
ಅವರು ಮಂಗಳವಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಕೊಟ್ಟ ಐದು ಗ್ಯಾರಂಟಿ ಅನುಷ್ಠಾನ ಆಗುತ್ತೋ ಇಲ್ಲವೋ ಎಂದು ಬಿಜೆಪಿ ಟೀಕೆ ಮಾಡಿಕೊಂಡು ಬಂದಿದ್ದು, ಸರ್ಕಾರ ರಚನೆ ಮಾಡಿದ ಮೊದಲನೇ ದಿನ ಗ್ಯಾರಂಟಿ ಘೋಷಣೆ ಮಾಡಿದ್ದೇವೆ, ಎರಡನೇ ಸಂಪುಟ ಸಭೆಯಲ್ಲಿ ದಿನಾಂಕ ನಿಗದಿಯನ್ನು ಮಾಡಿದ್ದೇವೆ. ನಾವು ನುಡಿದಂತೆ ನಡೆಯುತ್ತಿದ್ದೇವೆ.
ಬಿಜೆಪಿ ಸೋತರೆ ರಾಜ್ಯಕ್ಕೆ ಸಹಕಾರ ಕೊಡಲ್ಲ ಎಂದು ಜೆಪಿ ನಡ್ಡಾ ಹೇಳಿದ್ದರು. ಅವರ ಮಾತಿನಂತೆ ನಡೆದುಕೊಂಡಿದ್ದಾರೆ. ಯಾರು ಹಸಿದುಕೊಂಡು ಇರಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದ್ದೇವೆ. ಉಚಿತವಾಗಿ ಅಕ್ಕಿ ಕೊಡಿ ಎಂದು ನಾವು ಕೇಂದ್ರದ ಬಳಿ ಕೇಳಿಲ್ಲ. ಜೂನ್ 12 ರಂದು ಎಫ್ ಐ ಸಿ ಜುಲೈನಲ್ಲಿ 2,88,425 ಮೆಟ್ರಿಕ್ ಟನ್ ಅಕ್ಕಿ ಕೊಡುವ ವಾಗ್ದಾನ ನೀಡಿದ್ದರು. ಅದರೆ ಮತ್ತೆ ಪತ್ರ ಬರೆದು, ಗೋಧಿ ಹಾಗೂ ಅಕ್ಕಿ ರಾಜ್ಯಗಳಿಗೆ ಸದ್ಯಕ್ಕೆ ಕೊಡಲ್ಲ ಎಂದು ಹೇಳಿದ್ದಾರೆ. ಈ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಬಿಜೆಪಿ. ಬಡವರ ಹೊಟ್ಟೆಯ ಮೇಲೆ ದಾಳಿ ಮಾಡುತ್ತಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುತ್ತಿದೆ ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಮೊಳಹಳ್ಳಿ ದಿನೇಶ್ ಹೆಗ್ಡೆ, ಮುನಿಯಾಲು ಉದಯ್ ಶೆಟ್ಟಿ, ಪ್ರಶಾಂತ್ ಪೂಜಾರಿ, ಗೀತಾ ವಾಗ್ಳೆ, ವಿಶ್ವಾಸ್ ಅಮೀನ್, ಪ್ರಶಾಂತ್ ಜತ್ತನ್ನ, ಹರೀಶ್ ಕಿಣಿ, ಕೃಷ್ಣಮೂರ್ತಿ ಆಚಾರ್ಯ, ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್, ಯತೀಶ್ ಕರ್ಕೇರಾ ಹಾಗೂ ಇತರರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…