Featured

ಉಡುಪಿ -: ಅನ್ನಭಾಗ್ಯ ಯೋಜನೆ : ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ – vishwanews24

ಉಡುಪಿ -: ಅನ್ನಭಾಗ್ಯ ಯೋಜನೆ : ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ

ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ 2023 ರ ಮಾಹೆಯಿಂದ ನೀಡಲಾಗುತ್ತಿದ್ದ ನಗದು ವರ್ಗಾವಣೆಯ ಬದಲಾಗಿ ಪ್ರತಿ ಮಾಹೆಯಲ್ಲಿ ಎನ್.ಎಫ್.ಎಸ್.ಎ ಯೋಜನೆಯ ಅಕ್ಕಿ ಹಂಚಿಕೆಯೊoದಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಫೆಬ್ರವರಿ ತಿಂಗಳಿoದ ಅನ್ವಯವಾಗುವಂತೆ ಮಾರ್ಚ್ ತಿಂಗಳಿoದ ನೀಡಲಾಗುತ್ತದೆ.

ಅದರಂತೆ ಮಾರ್ಚ್ ತಿಂಗಳಲ್ಲಿ ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಎನ್.ಎಫ್.ಎಸ್ ಯೋಜನೆಯ 5 ಕೆ.ಜಿ, ಫೆಬ್ರವರಿ ತಿಂಗಳ ಅನ್ನಭಾಗ್ಯ ಯೋಜನೆಯ ಬಾಬ್ತು 5 ಕೆ.ಜಿ ಅಕ್ಕಿ, ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆಯ 5 ಕೆ.ಜಿ. ಅಕ್ಕಿ ಸೇರಿ ಒಟ್ಟು ಈ ತಿಂಗಳಲ್ಲಿ 15 ಕೆ.ಜಿ ಅಕ್ಕಿಯನ್ನು ಆದ್ಯತಾ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ.

ಅಂತ್ಯೋದಯ ಪಡಿತರ ಚೀಟಿಗಳಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಂಚಿಕೆ ಇರುವುದರಿಂದ 2025 ರ ಮಾರ್ಚ್ ತಿಂಗಳಿನಿAದ ಏಕಸದಸ್ಯ, ದ್ವಿಸದಸ್ಯ, ತ್ರಿಸದಸ್ಯರನ್ನು ಹೊಂದಿರುವ ಅಂತ್ಯೋದಯ ಪಡಿತರ ಚೀಟಿಗಳನ್ನು ಹೊರತುಪಡಿಸಿ 4 ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳಿಗೆ ಪ್ರತಿ ತಿಂಗಳಲ್ಲಿ ಹೆಚ್ಚುವರಿ ಸದಸ್ಯರಿಗೆ 5 ಕೆ.ಜಿ. ಅಕ್ಕಿಯನ್ನು ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

3 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

7 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

7 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

7 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

8 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

8 hours ago