ಉಡುಪಿ ಅನ್ ಲಾಕ್ ಮಾರ್ಗಸೂಚಿ -Vishwanews24
ಉಡುಪಿ ಅನ್ ಲಾಕ್ ಮಾರ್ಗಸೂಚಿ -Vishwanews24
ಉಡುಪಿ : ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 5% ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಿ ಅನ್ಲಾಕ್ ಘೋಷಣೆ ಮಾಡಲಾಗಿದೆ. ಅನ್ಲಾಕ್ ಘೋಷಣೆ ಆಗಿರುವ ಜಿಲ್ಲೆಗಳಿಗೆ ಸಂಬಂಧಿಸಿ ನೂತನ ಪರಿಷ್ಕೃತ ಮಾರ್ಗಸೂಚಿ ಯನ್ನು ಪ್ರಕಟಿಸಿದೆ.
ನೂತನ ಮಾರ್ಗಸೂಚಿ: ಜಿಲ್ಲೆಯಾದ್ಯಂತ ಸಂಜೆ 7.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ
ಜಾರಿಯಲ್ಲಿರುತ್ತದೆ. ಜಿಲ್ಲೆಯಾದ್ಯಾಂತ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ.
ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರವನ್ನು ಆಸನ ಸಾಮರ್ಥ್ಯದ 50% ರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು (COVID APPROPRIATE BEHAVIOUR -CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ, ಬಸ್ ಗಳಲ್ಲಿ ನಿಂತುಕೊಂಡು ಪ್ರಯಾಣ ಮಾಡಲು ನಿರ್ಭಂಧಿಸಲಾಗಿದೆ.
ಕೋವಿಡ್ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಸರ್ಕಾರದ ಆದೇಶ ಮತ್ತು ಸೇರ್ಪಡೆ ಆದೇಶಗಳನ್ನುಯಥಾವತ್ತಾಗಿ ಹಾಗೂ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಆದೇಶವನ್ನು ಜುಲೈ 05 ವರೆಗೆ ಮುಂದುವರಿಸಲಾಗಿದೆ. ಹಾಗೂ ಈ ಕೆಳಕಂಡ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ. ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಎಲ್ಲಾ ಉತ್ಪಾದನಾ ಘಟಕಗಳು/ ಕೈಗಾರಿಕಾ ಸಂಸ್ಥೆಗಳು /ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 50% ರಷ್ಟು ಸಿಬ್ಬಂದಿ ಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ. ಆದಾಗ್ಯೂ ಉಡುಪು(Garment) ತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ ಕೈಗಾರಿಕಾ ಸಂಸ್ಥೆಗಳು/ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 30% ರಷ್ಟು ಸಿಬ್ಬಂದಿಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಚರಿಸಲು ಅನುಮತಿಸಲಾಗಿದೆ.
ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್ ಗಳಲ್ಲಿ (ಮದ್ಯ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಶೇ 50 ಸಾಮರ್ಥ್ಯದೊಂದಿಗೆ ಲಾಡ್ಜ್ ಗಳು ಮತ್ತು ರೆಸಾರ್ಟ್ ಗಳಿಗೆ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಕಡ್ಡಾಯವಾಗಿ ಅನುಸರಿಸುವ ಷರತ್ತುಗಳೊಂದಿಗೆ ಅವಕಾಶ ನೀಡಲಾಗಿದೆ.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು)
ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ( Construction activities/ Civil repair ) ಅನುಮತಿ ನೀಡಲಾಗಿದ್ದು, ಕೋವಿಡ್ ನಿಯಮ ಗಳನ್ನು ಪಾಲಿಸಿಕೊಂಡು ವ್ಯವಹರಿಸುವ ಅಂಗಡಿಗಳು / ಸಂಸ್ಥೆಗಳಿಗೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ವಾಕಿಂಗ್ ಮತ್ತು ಜಾಗಿಂಗ್ ಗೆ ತೆರಳುವವರಿಗೆ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆ ಯವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಯಾವುದೇ ಗುಂಪುಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
ಜಿಮ್ ಗಳಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಇಲ್ಲದೆ ಶೇ.50 ರಷ್ಟು ಸಾಮರ್ಥ್ಯ ದೊಂದಿಗೆ ಕೋವಿಡ್ ನಿಯಮ ಅನುಸರಿಸಿಕೊಂಡು ಕಾರ್ಯಚರಿಸಲು ಅವಕಾಶ ನೀಡಲಾಗಿದೆ. ಹಾಗೂ ಗರಿಷ್ಠ 2 ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿಸಲಾಗಿದೆ. ಇದರೊಂದಿಗೆ ವೀಕ್ಷಕರಿಲ್ಲದೆ ಹೊರಾಂಗಣ ಕ್ರೀಡೆ ನಡೆಸಲು ಅನುಮತಿ ನೀಡಲಾಗಿದ್ದು ಒಳಾಂಗಣ ಕ್ರೀಡೆಗಳಿಗೆ ಅವಕಾಶ ನೀಡಿರುವುದಿಲ್ಲ. ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಶೇ. 50 ರಷ್ಟು ಮಂದಿಗೆ ಮಾತ್ರ ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ.
ಇನ್ನು ಅಗತ್ಯ ಮತ್ತು ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಕಚೇರಿಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿ ಸಲು ಅನುಮತಿಸಿದ್ದು ಸಾಧ್ಯವಾದಷ್ಟು ಮನೆಯಿಂದ ಕೆಲಸವನ್ನು ನಿರ್ವಹಿಸಲು ಪ್ರೋತ್ಸಾಹಿಸಲಾಗಿದೆ. ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಲಾಗಿದೆ. ಈಗಾಗಲೇ ನಿಗದಿಯಾಗಿರುವ ಮದುವೆಯನ್ನು 40 ಜನರಿಗೆ ಸೀಮಿತಗೊಳಿಸಿ ಸರಳವಾಗಿ ಮನೆಗಳಲ್ಲಿ ನಡೆಸಲು ಅನುಮತಿ ನೀಡಿದ್ದು ಕೆಲವೊಂದು ಷರತ್ತು ಗಳನ್ನು ವಿಧಿಸಿದೆ. ಅದರಂತೆ ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು. ಹಾಗೂ ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ ಕಾರ್ಯಕ್ರಮಕ್ಕೆ 40 ಪಾಸ್ಗಳನ್ನು ನೀಡಬೇಕು. ಪಾಸ್ ಹೊಂದಿರು ವವರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರದ್ದು, ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದೆ.
ಇನ್ನು ಶವಸಂಸ್ಕಾರ /ಅಂತ್ಯಕ್ರಿಯೆಗಳಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಗರಿಷ್ಠ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಇನ್ನು ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ರಾತ್ರಿ 7 ರಿಂದ ಬೆಳಿಗ್ಗೆ 05 ರ ನಡುವೆ ಅಗತ್ಯ ಚಟುವಟಿಕೆಗಳಿಗೆ ಹೊರತು ಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು–ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ.ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆ ಗಳು/ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ದೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಧೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ / ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚಾರಿಸಬಹುದಾಗಿದೆ.
ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ .ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ , ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಕೂಡಾ ಜಾರಿಯಲ್ಲಿ ಇರಲಿದ್ದು, ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24/7 ಕಾರ್ಯಾಚರಣೆಗಳ ಅಗತ್ಯವಿರುವ ಎಲ್ಲಾ ಕೈಗಾರಿಕೆಗಳು/ಕಂಪನಿಗಳು/ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು, ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಬಹುದಾಗಿರುತ್ತದೆ. ಆದಾಗ್ಯೂ, ಸಾಧ್ಯವಾದಷ್ಟು ಮಟ್ಟಿಗೆ, ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು.
ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನು ಸಂಬಂಧಿಸಿದ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿ/ಸಂಸ್ದೆ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿಸುವುದು .ಅವರನ್ನು ಹೊರತು ಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾ ರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸ ಬಹುದಾಗಿದೆ. ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿಸಿದೆ.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ, ಬೀದಿಬದಿ ವ್ಯಾಪಾರಸ್ಥರಿಗೆ, ಸಾರ್ವಜನಿಕ ವಿತರಣಾ ವ್ಯವಸ್ಥೆ(PDS)ಯ ಅಂಗಡಿ ಗಳಿಗೆ ಹಾಗೂ ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಕಾರ್ಯಚರಿಸಲು ಅನುಮತಿ ನೀಡಲಾಗಿದ್ದು ಈ ಹಿಂದಿನ ನಿಯಮಗಳು ಅನ್ವಯಿಸುತ್ತದೆ. ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆ ಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ 24×7ಹೋಮ್ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿ ಸಲಾಗಿದೆ. ರೆಸ್ಟೋರೆಂಟ್ ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿ ಗಳನ್ನು ಮಾತ್ರ ಅನುಮತಿಸಲಾಗಿದೆ. ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದ್ದು ಇತರ ದಿನಗಳಲ್ಲಿ ಇರುವ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಇನ್ನು ಮದುವೆ ಹಾಗೂ ಅಂತ್ಯ ಸಂಸ್ಕಾರಗಳಿಗೆ ಇತರ ದಿನಗಳಲ್ಲಿ ಇರುವ ನಿಯಮಗಳು ಅನ್ವಯವಾಗಲಿದೆ.
