ಉಡುಪಿ : ಒಂದು ವಾರದ ಹಿಂದೆ ಸಂತೆಕಟ್ಟೆಯ ಲಕ್ಷ್ಮಿನಗರ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಹೆರ್ಗ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝಾದ್ (19) ಮೃತಪಟ್ಟ ದುರ್ದೈವಿ. ಸಂತೆಕಟ್ಟೆಯ ಲಕ್ಷ್ಮಿನಗರ ರಸ್ತೆಯಲ್ಲಿ ಸರ್ಕಾರಿ ಬಸ್ ಮತ್ತು ಇವರು ಸಂಚರಿಸುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಝಾದ್ ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ವೈದ್ಯರ ಸತತ ಪ್ರಯತ್ನಗಳ ಹೊರತಾಗಿಯೂ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:
ಮೃತ ಮೊಹಮ್ಮದ್ ಝಾದ್ ಇತ್ತೀಚೆಗಷ್ಟೇ ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದರು. ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಅರಸಿ ಗಲ್ಫ್ ರಾಷ್ಟ್ರಕ್ಕೆ ಉದ್ಯೋಗಕ್ಕಾಗಿ ತೆರಳಲು ಸಕಲ ಸಿದ್ಧತೆ ನಡೆಸುತ್ತಿದ್ದರು. ಆದರೆ ವಿಧಿಯಾಟ ಬೇರೆಯೇ ಆಗಿತ್ತು. ಗಲ್ಫ್ ಕನಸು ನನಸಾಗುವ ಮೊದಲೇ ಅಪಘಾತ ಇವರ ಬದುಕನ್ನು ಬಲಿಪಡೆದಿದೆ. ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…