Featured

ಮಣಿಪಾಲ : ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ : ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ

ಉಡುಪಿ : ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಶೇಖರಣೆ ಮಾಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಡುಪಿ ಮಣಿಪಾಲದ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಗುಜರಾತ್‌ ಮೂಲದ ಕುಶ್‌ ಕೆ ಯುಶ್‌ ಪಟೇಲ್‌ (20) ಹಾಗೂ ಉತ್ತರ ಪ್ರದೇಶ ಮೂಲದ ದೇವಾಂಶ್‌ ತ್ಯಾಗಿ (22) ಬಂಧಿತ ಆರೋಪಿಗಳು.

ಆರೋಪಿಗಳು ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಪಾರ್ಟ್ಮೆಂಟ್‌ ಕೊಠಡಿಯಲ್ಲಿ ಶೇಖರಿಸಿ ಇಟ್ಟಿರುವುದು ತನಿಖೆಯಿಂದ ಕಂಡುಬಂದಿದೆ.

ಮಾಹಿತಿ ಆಧಾರಿಸಿ ಮಣಿಪಾಲದ ಎರಡು ಅಪಾರ್ಟ್ಮೆಂಟ್ ಗೆ ದಾಳಿ ನಡೆಸಿದ ಪೊಲೀಸರು ಈ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದು, ಬಂಧಿತರಿಂದ 36 ಸಾವಿರ ಮೌಲ್ಯದ 727 ಗ್ರಾಂ ಗಾಂಜಾ ಹಾಗೂ 30 ಸಾವಿರ ರೂ. ಮೌಲ್ಯದ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

4 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

5 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

5 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

6 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago