ಉಡುಪಿ : ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಶೇಖರಣೆ ಮಾಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಡುಪಿ ಮಣಿಪಾಲದ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.
ಗುಜರಾತ್ ಮೂಲದ ಕುಶ್ ಕೆ ಯುಶ್ ಪಟೇಲ್ (20) ಹಾಗೂ ಉತ್ತರ ಪ್ರದೇಶ ಮೂಲದ ದೇವಾಂಶ್ ತ್ಯಾಗಿ (22) ಬಂಧಿತ ಆರೋಪಿಗಳು.
ಆರೋಪಿಗಳು ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಶೇಖರಿಸಿ ಇಟ್ಟಿರುವುದು ತನಿಖೆಯಿಂದ ಕಂಡುಬಂದಿದೆ.
ಮಾಹಿತಿ ಆಧಾರಿಸಿ ಮಣಿಪಾಲದ ಎರಡು ಅಪಾರ್ಟ್ಮೆಂಟ್ ಗೆ ದಾಳಿ ನಡೆಸಿದ ಪೊಲೀಸರು ಈ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದು, ಬಂಧಿತರಿಂದ 36 ಸಾವಿರ ಮೌಲ್ಯದ 727 ಗ್ರಾಂ ಗಾಂಜಾ ಹಾಗೂ 30 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…