Judge and gavel in courtroom
ಉಡುಪಿ : ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸ್ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ನೀಡಿದೆ.
ಕುಂದಾಪುರದ ನಿವಾಸಿ ಮಿಥುನ್(21) ಶಿಕ್ಷೆಗೆ ಗುರಿಯಾದ ಆರೋಪಿ. ಈತ 17ವರ್ಷ ಪ್ರಾಯದ ನೊಂದ ಬಾಲಕಿಯನ್ನು ಕಾಲೇಜಿಗೆ ತೆರಳುವ ವೇಳೆ ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ, ಪುಸಲಾಯಿಸಿದ್ದು, 2023ರ ಜನವರಿಯಿಂದ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದನು. ನಂತರ ಬಾಲಕಿಯ ಆರೋಗ್ಯದಲ್ಲಿ ಆದ ವ್ಯತ್ಯಾಸವನ್ನು ಗಮನಿಸಿದ ಪೋಷಕರು, ವೈದ್ಯಕೀಯ ಪರೀಕ್ಷೆ ನಡೆಸಿದರು. ಇದರಿಂದ ಆಕೆ ಗರ್ಭಿಣಿ ಎಂಬುದು ತಿಳಿದು, ಪ್ರಕರಣ ಬೆಳಕಿಗೆ ಬಂತು. ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ನಂದ ಕುಮಾರ್, ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಈ ಬಗ್ಗೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅಭಿಯೋಜನೆ ಪರ ಒಟ್ಟು ಸಲ್ಲಿಸಲಾದ 30ಸಾಕ್ಷಿಗಳ ಪೈಕಿ 16 ಸಾಕ್ಷಿಗಳ ವಿಚಾರಣೆಯನ್ನು, ವಾದ ಹಾಗೂ ಪ್ರತಿವಾದಗಳನ್ನು ಮತ್ತು ಡಿಎನ್ಎ ಸಾಕ್ಷಿಯನ್ನು ಪರಿಗಣಿಸಿ, ಆರೋಪಿ ದೋಷಿ ಎಂಬುದಾಗಿ ಅಭಿಪ್ರಾಯ ಪಟ್ಟರು. ಅದರಂತೆ ಆರೋಪಿಗೆ ಒಟ್ಟು 20 ವರ್ಷಗಳ ಜೈಲು ಶಿಕ್ಷೆ ಮತ್ತು 21ಸಾವಿರ ರೂ. ದಂಡ ವಿಧಿಸಿದರು. ದಂಡದ ಮೊತ್ತದಲ್ಲಿ 15ಸಾವಿರ ರೂ. ಬಾಲಕಿಗೆ, 6ಸಾವಿರ ರೂ. ಸರಕಾರಕ್ಕೆ ನೀಡುವಂತೆ ಮತ್ತು ನೊಂದ ಬಾಲಕಿಗೆ ಸರಕಾರದಿಂದ 2ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದರು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…