Featured

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ :  ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ – Vishwanews24

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ :  ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ

ಉಡುಪಿ: ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾಗಿದ್ದು ಹೀಗಾಗಿ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಅಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ರಾಜೀಬ್ ಅಲಿಯಾಸ್ ಚೋಟು (20) ಶಿಕ್ಷೆಗೆ ಗುರಿಯಾದ ಆರೋಪಿ.

2018ರ ಪೆಬ್ರವರಿ ತಿಂಗಳಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರಸ್ತೆ ಕೆಲಸಕ್ಕೆ ಬಂದಿದ್ದ ರಾಜೀಬ್ 14 ವರ್ಷದ ಪ್ರಾಯದ ಬಾಲಕಿಯನ್ನು ಮನೆಯಿಂದ ಅಪಹರಿಸಿದ್ದನು. ಮಗಳು ಕಾಣೆಯಾದ ಬಗ್ಗೆ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅಪ್ರಾಪ್ತೆಯನ್ನು ರೈಲು ನಿಲ್ದಾಣವೊಂದರಲ್ಲಿ ಪತ್ತೆ ಮಾಡಿ ಪೊಲೀಸರು ಕರೆ ತಂದಿದ್ದರು. ಆಪ್ತ ಸಮಾಲೋಚನೆ ವೇಳೆ ಬಾಲಕಿಯು ರಾಜೀಬ್ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಇತರ ಐವರ ವಿರುದ್ಧ ಮಾಹಿತಿ ನೀಡಿದ ಆಧಾರದಲ್ಲಿ ಎಲ್ಲರನ್ನು ಬಂಧಿಸಲಾಗಿತ್ತು.

ಮೊದಲಿಗೆ ಅಂದಿನ ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ ಭಾಗಶಃ ತನಿಖೆ ನಡೆಸಿದ್ದು ತರುವಾಯ ಅಂದಿನ ಡಿವೈಎಸ್ಪಿ ಟಿ.ಆರ್ ಜೈಶಂಕರ್ ದೋಷಾರೋಪಣಾ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 46 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 28 ಸಾಕ್ಷಿಗಳ ವಿಚಾರಣೆ ನಡೆದಿದ್ದು, ಸಂತ್ರಸ್ತ ಬಾಲಕಿ ನುಡಿದ ಸಾಕ್ಷ್ಯ ಹಾಗೂ ಆಕೆ ಸಹೋದರ, ಸಹೋದರಿ ಸಾಕ್ಷಿಗಳು, ಸಾಂದರ್ಭಿಕ ಸಾಕ್ಷಿಗಳ ಹೇಳಿಕೆಯಿಂದ ರಾಜೀಬ್ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಉಳಿದ ಐವರು ಆರೋಪಗಳನ್ನು ಖುಲಾಸೆಗೊಳಿಸಲಾಯಿತು.

ಪರಿಶಿಷ್ಟ ಜಾತಿಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ರಾಜೀಬ್ ಗೆ ಅಜೀವ ಕಾರಾಗೃಹ ಶಿಕ್ಷೆ ಸಹಿತ, ಅಪಹರಣ, ಅತ್ಯಾಚಾರ ಮೊದಲಾದ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿದ್ದು 56 ಸಾವಿರ ದಂಡ ವಿಧಿಸಲಾಗಿದೆ. ಈ ದಂಡದಲ್ಲಿ 16 ಸಾವಿರ ರೂ. ಸರ್ಕಾರಕ್ಕೆ ಹಾಗೂ 40 ಸಾವಿರ ನೊಂದ ಬಾಲಕಿಗೆ ನೀಡಲು ಆದೇಶಿಸಿದ್ದಲ್ಲದೆ ಸಂತ್ರಸ್ತೆಗೆ 5 ಲಕ್ಷ ಪರಿಹಾರವನ್ನು ಸರ್ಕಾರ ನೀಡುವಂತೆ ನ್ಯಾಯಾಲಯ ತೀರ್ಪುನಲ್ಲಿ ತಿಳಿಸಿದೆ.

ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಪ್ರಾಸಿಕ್ಯೂಶನ್ ಪರವಾಗಿ ವಾದ ಮಂಡಿಸಿದ್ದರು.

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

18 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

22 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

52 minutes ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

58 minutes ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago