Judge and gavel in courtroom
ಉಡುಪಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಅರೆನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿದಲ್ಲದೆ ಬ್ಲ್ಯಾಕ್ ಮೇಲ್ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ, 62 ಸಾವಿರ ರೂಪಾಯಿ ದಂಡ ವಿಧಿಸಿದೆ. ಮಜೂರು ನಿವಾಸಿ ಶಂಶುದ್ದೀನ್ (24) ಶಿಕ್ಷೆಗೆ ಗುರಿಯಾದ ಆರೋಪಿ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಗ್ರಾಮದ ನಿವಾಸಿಯಾಗಿರುವ ಆರೋಪಿ, ಪ್ರತಿ ದಿನ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಬಿಡುತಿದ್ದ. ಆಟೋದಲ್ಲಿ ಶಾಲೆಗೆ ಬಿಡ್ತಿದ್ದ ವೇಳೆ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ, ವಿಡಿಯೋ ಮಾಡಿ ವೈರಲ್ ಮಾಡುವುದಾಗಿ ಬೆದರಿಸಿದ್ದ. ನನ್ನ ಜೊತೆ ಬಂದರೆ ವಿಡಿಯೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದ. ಆರೋಪಿಯ ಮಾತುಗಳನ್ನು ನಂಬಿದ ಬಾಲಕಿ ಆತನ ಜೊತೆ ಬರಲು ಒಪ್ಪಿಕೊಂಡಿಳು. ಆಗ ಆರೋಪಿ ಬಾಲಕಿಯನ್ನು ಲಾಡ್ಜ್, ರೆಸಾರ್ಟ್ ಗೆ ಕರೆದುಕೊಂಡು ಹೋಗಿ ನಿರಂತರ ಅತ್ಯಾಚಾರ ಎಸಗಿದ್ದಾನೆ.
ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಅರೆನಗ್ನ ವಿಡಿಯೋವನ್ನು ತಾಯಿಗೆ ಕಳುಹಿಸಿದ್ದಾನೆ. ಬಾಲಕಿಯ ವಿಡಿಯೋ ತಾಯಿಯ ಮೊಬೈಲ್‌ಗೆ ಕಳುಹಿಸಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ನೊಂದ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸದ್ಯ ಆರೋಪಿಗೆ ಕಠಿಣ ಶಿಕ್ಷೆ ಸಿಕ್ಕಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…