ಉಡುಪಿ

ಉಡುಪಿ : ಅಪ್ರಾಪ್ತ ಬಾಲಕಿಯ ಅರೆನಗ್ನ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ – ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 62 ಸಾವಿರ ರೂಪಾಯಿ ದಂಡ – vishwanews24

ಉಡುಪಿ : ಅಪ್ರಾಪ್ತ ಬಾಲಕಿಯ ಅರೆನಗ್ನ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ – ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 62 ಸಾವಿರ ರೂಪಾಯಿ ದಂಡ

ಕಾಪು ಮಜೂರು ನಿವಾಸಿ ಶಂಶುದ್ದೀನ್ ಶಿಕ್ಷೆಗೆ ಗುರಿಯಾದ ಆರೋಪಿ

ಉಡುಪಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯ ಅರೆನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿದಲ್ಲದೆ ಬ್ಲ್ಯಾಕ್ ಮೇಲ್ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ, 62 ಸಾವಿರ ರೂಪಾಯಿ ದಂಡ ವಿಧಿಸಿದೆ. ಮಜೂರು ನಿವಾಸಿ ಶಂಶುದ್ದೀನ್ (24) ಶಿಕ್ಷೆಗೆ ಗುರಿಯಾದ ಆರೋಪಿ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಗ್ರಾಮದ ನಿವಾಸಿಯಾಗಿರುವ ಆರೋಪಿ, ಪ್ರತಿ ದಿನ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಬಿಡುತಿದ್ದ. ಆಟೋದಲ್ಲಿ ಶಾಲೆಗೆ ಬಿಡ್ತಿದ್ದ ವೇಳೆ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ, ವಿಡಿಯೋ ಮಾಡಿ ವೈರಲ್ ಮಾಡುವುದಾಗಿ ಬೆದರಿಸಿದ್ದ. ನನ್ನ ಜೊತೆ ಬಂದರೆ ವಿಡಿಯೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದ. ಆರೋಪಿಯ ಮಾತುಗಳನ್ನು ನಂಬಿದ ಬಾಲಕಿ ಆತನ ಜೊತೆ ಬರಲು ಒಪ್ಪಿಕೊಂಡಿಳು. ಆಗ ಆರೋಪಿ ಬಾಲಕಿಯನ್ನು ಲಾಡ್ಜ್, ರೆಸಾರ್ಟ್ ಗೆ ಕರೆದುಕೊಂಡು ಹೋಗಿ ನಿರಂತರ ಅತ್ಯಾಚಾರ ಎಸಗಿದ್ದಾನೆ.

ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಅರೆನಗ್ನ ವಿಡಿಯೋವನ್ನು ತಾಯಿಗೆ ಕಳುಹಿಸಿದ್ದಾನೆ. ಬಾಲಕಿಯ ವಿಡಿಯೋ ತಾಯಿಯ ಮೊಬೈಲ್‌ಗೆ ಕಳುಹಿಸಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ನೊಂದ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸದ್ಯ ಆರೋಪಿಗೆ ಕಠಿಣ ಶಿಕ್ಷೆ ಸಿಕ್ಕಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

18 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

18 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago