ಉಡುಪಿ: ತನ್ನ ಅಪ್ರಾಪ್ತ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ತಂದೆಯ ಮೇಲಿದ್ದ ದೋಷಾರೋಪಣೆಗಳು ಸಾಬೀತಾಗಿದ್ದು ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೊಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ.
ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರ ಮೇ ತಿಂಗಳಿನಲ್ಲಿ ಈ ಘಟನೆ ನಡೆದಿತ್ತು. ಮನೆಯಲ್ಲಿ ತಾಯಿ ಹಾಗೂ ಕಿರಿಯ ಸೋದರ ಇಲ್ಲದ ಸಂದರ್ಭ 41 ವರ್ಷದ ತಂದೆ 14 ವರ್ಷ ಪ್ರಾಯದ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ. ಎರಡನೇ ಬಾರಿಯೂ ಮನೆಯಲ್ಲಿ ಯಾರಿಲ್ಲದ ವೇಳೆ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು ಯಾರಿಗಾದರೂ ಹೇಳಿದಲ್ಲಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದ. ನೊಂದ ಬಾಲಕಿ ಪಕ್ಕದ ಮನೆಯವರ ಬೆಂಬಲದೊಂದಿಗೆ ತನ್ನ ತಾಯಿಗೆ ಕರೆ ಮಾಡಿ ತಾನು ಅನುಭವಿಸಿದ ನೋವನ್ನು ತಾಯಿಗೆ ತಿಳಿಸಿದ್ದಾಳೆ. ಮನೆಗೆ ಬಂದ ಆಕೆ ಕೂಲಂಕುಷವಾಗಿ ವಿಚಾರಿಸಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ. ಬಳಿಕ ತಾಯಿ ಈ ಬಗ್ಗೆ ಉಡುಪಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಆರೋಪಿ ತಂದೆಯನ್ನು ಬಂದಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಮಹಿಳಾ ಠಾಣೆಯ ಅಂದಿನ ಸಿಪಿಐ ಸಿ.ಕಿರಣ್ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟು 23 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 11 ಮಂದಿಯ ವಿಚಾರಣೆ ನಡೆಸಲಾಗಿತ್ತು. ಸಂತ್ರಸ್ತ ಬಾಲಕಿ, ಬಾಲಕಿಯ ತಾಯಿ ಹಾಗೂ ನೆರೆಮನೆಯಾಕೆ ನುಡಿದ ಸಾಕ್ಷಿಗಳು ಅಭಿಯೋಜನೆಗೆ ಪೂರಕವಾಗಿತ್ತು.
ಇವೆಲ್ಲವುಗಳ ಆಧಾರದಲ್ಲಿ ಬಾಲಕಿಯ ತಂದೆ ಅಪರಾಧಿ ಎಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಅಪರಾಧಿಗೆ ಜೀವಿತಾವಧಿ (ಕೊನೆಯ ಉಸಿರು ಇರುವ ತನಕ) ಜೈಲು ಶಿಕ್ಷೆ, 20 ಸಾವಿರ ರೂ.ದಂಡ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ 5 ಸಾವಿರ ರೂ.ದಂಡ ವಿಧಿಸಿದ್ದು, ಸಂತ್ರಸ್ತ ಬಾಲಕಿಗೆ ಸರಕಾರ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಲಾಗಿದೆ.ಉಡುಪಿಯ ಪೊಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…