Featured

ಉಡುಪಿ: ಅಯೋಧ್ಯೆ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ – Vishwanews24

ಉಡುಪಿ: ಅಯೋಧ್ಯೆ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಮುಖರ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಜೀ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯದರ್ಶಿಗಳಾದ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ , ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೇರಿದಂತೆ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸ. 26 ರಿಂದ ಅ.5ರವರೆಗೆ ಉಚ್ಚಿಲ ಮಹಾಲಕ್ಷ್ಮೀ ದಸರಾ – Vishwanews24

ಆರಂಭದಲ್ಲಿ ಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿತ್ತು. ಜಿಎಸ್‍ಟಿ ವೆಚ್ಚ , ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1,300 ಕೋಟಿ ಆಗಬಹುದೆಂದು ಅಂದಾಜಿಸಲಾಗಿದೆ. ಮಂದಿರಕ್ಕಾಗಿ ದೇಶಾದ್ಯಂತ ಭಕ್ತರು ನೀಡುತ್ತಿರುವ ದೇಣಿಗೆಯೂ ಹರಿದು ಬರುತ್ತಿದೆ. ತಿಂಗಳಿಗೆ ಸುಮಾರು 50 ಲಕ್ಷಕ್ಕಿಂತಲೂ ಅಧಿಕ ದೇಣಿಗೆ ಬರುತ್ತಿದ್ದು ಕೆಲವೊಮ್ಮೆ ಈ ಮೊತ್ತ ಕೋಟಿಗೂ ಮೀರಿದೆ.

ಈ ತನಕದ ಸುಮಾರು 300 ಕೋಟಿ ಖರ್ಚನ್ನು ಭಕ್ತರಿಂದ ಹರಿದು ಬರುತ್ತಿರುವ ದೇಣಿಗೆಯಿಂದಲೇ ನಿರ್ವಹಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು. ಆರಂಭದ ದೇಣಿಗೆ ಸಂಗ್ರಹ ಅಭಿಯಾನದಿಂದ ಬಂದ ಸಾವಿರ ಕೋಟಿಗೂ ಮೀರಿದ ಮೂಲಧನದ ನಿರ್ವಹಣೆಯ ಮಾಡಬೇಕಾದ ಕುರಿತಾಗಿಯೂ ಸಭೆ ಗಂಭೀರ ಚರ್ಚೆ ನಡೆಸಿತು.

ಪ್ರವೀಣ್ ನೆಟ್ಟಾರು ಕನಸಿನ ಮನೆ ನನಸು ಮಾಡಲು ಕುಟುಂಬಸ್ಥರ ಜತೆ ನಳಿನ್ ಕುಮಾರ್ ಮಾತುಕತೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago