ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಮುಖರ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಜೀ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯದರ್ಶಿಗಳಾದ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ , ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೇರಿದಂತೆ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸ. 26 ರಿಂದ ಅ.5ರವರೆಗೆ ಉಚ್ಚಿಲ ಮಹಾಲಕ್ಷ್ಮೀ ದಸರಾ – Vishwanews24
ಆರಂಭದಲ್ಲಿ ಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿತ್ತು. ಜಿಎಸ್‍ಟಿ ವೆಚ್ಚ , ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1,300 ಕೋಟಿ ಆಗಬಹುದೆಂದು ಅಂದಾಜಿಸಲಾಗಿದೆ. ಮಂದಿರಕ್ಕಾಗಿ ದೇಶಾದ್ಯಂತ ಭಕ್ತರು ನೀಡುತ್ತಿರುವ ದೇಣಿಗೆಯೂ ಹರಿದು ಬರುತ್ತಿದೆ. ತಿಂಗಳಿಗೆ ಸುಮಾರು 50 ಲಕ್ಷಕ್ಕಿಂತಲೂ ಅಧಿಕ ದೇಣಿಗೆ ಬರುತ್ತಿದ್ದು ಕೆಲವೊಮ್ಮೆ ಈ ಮೊತ್ತ ಕೋಟಿಗೂ ಮೀರಿದೆ.
ಈ ತನಕದ ಸುಮಾರು 300 ಕೋಟಿ ಖರ್ಚನ್ನು ಭಕ್ತರಿಂದ ಹರಿದು ಬರುತ್ತಿರುವ ದೇಣಿಗೆಯಿಂದಲೇ ನಿರ್ವಹಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು. ಆರಂಭದ ದೇಣಿಗೆ ಸಂಗ್ರಹ ಅಭಿಯಾನದಿಂದ ಬಂದ ಸಾವಿರ ಕೋಟಿಗೂ ಮೀರಿದ ಮೂಲಧನದ ನಿರ್ವಹಣೆಯ ಮಾಡಬೇಕಾದ ಕುರಿತಾಗಿಯೂ ಸಭೆ ಗಂಭೀರ ಚರ್ಚೆ ನಡೆಸಿತು.
ಪ್ರವೀಣ್ ನೆಟ್ಟಾರು ಕನಸಿನ ಮನೆ ನನಸು ಮಾಡಲು ಕುಟುಂಬಸ್ಥರ ಜತೆ ನಳಿನ್ ಕುಮಾರ್ ಮಾತುಕತೆ – Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…