Featured

ಉಡುಪಿ: ಅಯೋಧ್ಯೆ ರಾಮಮಂದಿರ ಕಣ್ಗಾವಲಿಗೆ ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆ – vishwanews24

ಉಡುಪಿ: ಅಯೋಧ್ಯೆ ರಾಮಮಂದಿರ ಕಣ್ಗಾವಲಿಗೆ ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆ

ಉಡುಪಿ: ಉತ್ತರ ಪ್ರದೇಶದ ಸರಕಾರ ಅಯೋಧ್ಯೆಯ ಶ್ರೀರಾಮ ಮಂದಿರದ ಭದ್ರತೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಕಣ್ಗಾವಲು ಇರಿಸಲು ಮಣಿಪಾಲದ ಎಂಐಟಿಯ ಉದ್ಯೋಗಿ, ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆಯಾಗಿದೆ.

ಸುಮಾರು 50 ದೂರದರ್ಶಕಗಳನ್ನು ಖರೀದಿಸುವ ಆರ್ಡರ್ ಈಗಾಗಲೇ ಇವರಿಗೆ ಆನ್‌ಲೈನ್ ಮೂಲಕ ಬಂದಿದೆ. ಸದ್ಯ 25 ದೂರದರ್ಶಕಗಳನ್ನು ತಯಾರಿಸಿ ನೀಡಲಾಗುವುದು ಎಂದು ಆರ್.ಮನೋಹರ್ ತಿಳಿಸಿದ್ದಾರೆ.

ಪ್ರಯೋಗಿಕವಾಗಿ ಇವರ ದೂರದರ್ಶಕಕ್ಕೆ ಮಾನ್ಯತೆ ದೊರೆತ್ತಿದ್ದು, ಆರ್.ಮನೋಹರ್ ಟೆಲಿಸ್ಕೋಪನ್ನು ಆವಿಷ್ಕಾರಣೆ ಮಾಡುವಲ್ಲಿ ಸಫಲತೆ ಕಂಡಿದ್ದಾರೆ. ನೇರವಾಗಿ ಪ್ರತಿಬಿಂಬವನ್ನು ನೋಡುವಂತಹ ದೂರದರ್ಶಕವನ್ನು ಆವಿಷ್ಕರಣೆ ಮಾಡಿ ರುವುದರಿಂದ ಇವರಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪೇಟೆಂಟ್ ಕೂಡ ದೂರದರ್ಶಕಕ್ಕೆ ಸಿಕ್ಕಿದೆ.

ದೂರದರ್ಶಕವನ್ನು ಇನ್ನಷ್ಟು ಸರಳ ರೀತಿಯಲ್ಲಿ ಮತ್ತು ಚಿಕ್ಕದಾದ ಗಾತ್ರಕ್ಕೆ ಮತ್ತು ಅತಿ ದೂರದ ವಸ್ತು ಕಾಣುವಂತೆ ಇನ್ನಷ್ಟು ಅಧ್ಯಯನದಲ್ಲಿ ತೊಡಗಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರದ ಭದ್ರತೆಯ ದೃಷ್ಟಿಯಲ್ಲಿ ಸರ್ಚಿಂಗ್ ನಡೆಸಲು ಮನೋಹರ್ ಅವರ ದೂರದರ್ಶಕ ಆಯ್ಕೆ ಆಗಿರುವುದು ಸ್ಥಳೀಯರಲ್ಲಿಯೂ ಸಂತಸ ತಂದಿದೆ ಎಂದು ಸ್ಥಳೀಯರಾದ ಮೋಹನ್ ದಾಸ ನಾಯಕ್ ಪರ್ಕಳ, ಗಣೇಶ್ ರಾಜ್ ಸರಳೇಬೆಟ್ಟು, ಜಯಶೆಟ್ಟಿ ಬನ್ನಂಜೆ, ರಾಜೇಶ್ ಪ್ರಭು ಪರ್ಕಳ, ಪ್ರಕಾಶ್ ನಾಯ್ಕ್ ಪರ್ಕಳ, ಜಯ ದೀಪ್ ನಾಯಕ್ ತಿಳಿಸಿದ್ದಾರೆ.

ಇವರು ಪರ್ಕಳ ಮತ್ತು ಉಡುಪಿಯಲ್ಲಿ ಕೆಲವು ಆಯ್ದ ಸ್ಥಳಗಳಲ್ಲಿ ಸೂರ್ಯ ಗ್ರಹಣ, ಚಂದ್ರಗ್ರಹಣ, ಶನಿಗ್ರಹ, ಗುರುಗ್ರಹ, ಮಂಗಳ ಗ್ರಹ ಇನ್ನಿತರ ಅನ್ಯಗ್ರಹಗಳನ್ನು ಇವರ ದೂರದರ್ಶಕದ ಮೂಲಕ ಉಚಿತವಾಗಿ ತೋರಿಸಿ ಕೊಟ್ಟಿದ್ದಾರೆ. ಅದೇ ರೀತಿ ಕೆಲವೊಂದು ಶಾಲೆಗಳಿಗೆ ಅವರೇ ತಯಾರಿಸಿದ ದೂರದರ್ಶಕವನ್ನ ಉಚಿತವಾಗಿ ನೀಡಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago