Featured

ಉಡುಪಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಒಂದು ವಾರ ಮಳೆಯ ಮುನ್ಸೂಚನೆ – vishwanews24

ಉಡುಪಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಒಂದು ವಾರ ಮಳೆಯ ಮುನ್ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆ ಯಂತೆ ಪಶ್ಚಿಮದ ಅರಬಿಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರ ಕಾಲ ಸಮುದ್ರ ಪ್ರಕ್ಷುಬ್ದತೆಯಿಂದ ಕೂಡಿರಲಿದ್ದು, ಈ ದಿನಗಳಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿದ್ದು, ದಡವನ್ನು ಅಪ್ಪಳಿಸುವ ಸಾದ್ಯತೆ ಇದೆ. ಈ ಹಿನ್ನೆಲೆ ಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರು ಹಾಗೂ ಅಧಿಕಾರಗಳಿಗೆ ಕೆಲವೊಂದು ಮುನ್ನೆಚ್ಚರಿಕೆ ಹಾಗೂ ಸೂಚನೆಗಳನ್ನು ನೀಡಿದೆ.

ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ಸಮುದ್ರ ಹಾಗೂ ನದಿಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸ ಬೇಕು. ಈಗಾಗಲೇ ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಸಾಧ್ಯವಿದ್ದಷ್ಟು ಬೇಗ ಸುರಕ್ಷಿತ ದಡವನ್ನು ಸೇರಬೇಕು. ತುರ್ತುಸೇವೆಗೆ ಶುಲ್ಕ ರಹಿತ 1077 ಅಥವಾ ದೂರವಾಣಿ ಸಂಖ್ಯೆ: 0820-2574802ನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

4 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

6 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago