ಉಡುಪಿ : ಜಿಲ್ಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಟೋಬರ್ 24 ರಿಂದ 31 ರ ವರಗೆ ಕೆ.ಎಸ್.ಆರ್.ಟಿ.ಸಿ ಮತ್ತು ಮೆಸ್ಕಾಂಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು
ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಹಾಡಲು ಯೋಜನೆ ರೂಪಿಸಿ, ಎಲ್ಲಾ ಶಾಲಾ,ಕಾಲೇಜು,ಹಾಸ್ಟೆಲ್‌ಗಳಲ್ಲಿ ಈ ಗೀತೆಗಳನ್ನು ಹಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಹ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ಐತಿಹಾಸಿಕ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದ ಅವರು, ಕಾರ್ಕಳದ ಬಾಹುಬಲಿ ಬೆಟ್ಟ ಮತ್ತು ಬೈಂದೂರಿನ ಸೇನೇಶ್ವರ ಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಅಚರಣೆ ನಡೆಯಲಿದ್ದು, ಕನ್ನಡ ತಾಯಿ ಭುವನೇಶ್ವರಿ ದೇವಿಗೆ ಪೂಜೆ ನಡೆಸಲಾಗುವುದು, ವಿವಿಧ ತಂಡಗಳಿ0ದ ಪಥ ಸಂಚಲನ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕುರಿತಂತೆ ಆಯ್ಕೆ ಸಮಿತಿಯಲ್ಲಿ ನಿರ್ಧರಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು , ರಾಜ್ಯೋತ್ಸವ ಆಚರಣೆ ಕುರಿತಂತೆ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದರು. ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…